ಧರ್ಮೇಗೌಡರ ನಿಧನದಿಂದಾಗಿ ತೆರವಾಗಿದ್ದ ಸ್ಥಾನಕ್ಕೆ ಮಾರ್ಚ್ 15 ಕ್ಕೆ ಚುನಾವಣೆ – ಆಯೋಗ ಘೋಷಣೆ

Suddi Sante Desk

ನವದೆಹಲಿ –

ರಾಜ್ಯದ ವಿಧಾನ ಪರಿಷತ್ ಸದಸ್ಯರಾಗಿದ್ದಂತ ಧರ್ಮೇಗೌಡರ ನಿಧನದಿಂದ ತೆರವಾಗಿದ್ದಂತ ಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ಮಾರ್ಚ್ 15 ರಂದು ಚುನಾವಣೆ ನಡೆಯಲಿದೆ.

ಅಂದು ಸಂಜೆಯೇ ಫಲಿತಾಂಶವನ್ನು ಘೋಷಣೆ ಮಾಡುವುದಾಗಿ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಿದೆ.

ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ಕೇಂದ್ರ ಚುನಾವಣಾ ಆಯೋಗವು, ಎಸ್ ಎಲ್ ಧರ್ಮೇಗೌಡ ಅವರ ನಿಧನದಿಂದಾಗಿ ತೆರವಾಗಿರುವಂತ ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಫೆಬ್ರವರಿ 25 ರಂದು ಚುನಾವಣೆಗಾಗಿ ಅಧಿಸೂಚನೆ ಹೊರಡಿಸಲಾಗುತ್ತದೆ.ಈ ಒಂದು ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್.4 ಆಗಿದೆ. ಮಾರ್ಚ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಮಾರ್ಚ್ 8 ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ. ಮಾರ್ಚ್ 15ರಂದು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮಾರ್ಚ್ 15ರಂದು ಸಂಜೆ 5 ಗಂಟೆಗೆ ಮತಏಣಿಕೆಯ ನಂತರ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿಸಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.