ಬೆಂಗಳೂರು –
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ.ದಿನಾಂಕ ವನ್ನು ಘೋಷಣೆ ಮಾಡಲಾಗಿದೆ ಹೌದು ಅಕ್ಟೋಬರ್.9ರಿಂದ ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳಲಿದ್ದು,ಡಿಸೆಂಬರ್.27, 2024 ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳ ಲಿದ್ದು ಪ್ರಕಟಣೆ ಹೊರಡಿಸಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ರಾಜ್ಯ ಚುನಾವಣಾಧಿಕಾರಿ ಎ.ಹನುಮನರಸಯ್ಯ ಅವರು ಚುನಾವಣ ಅಧಿಸೂಚನೆ ಹೊರಡಿಸಿ ದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣಾಧಿಕಾರಿಯಾಗಿರುವ 2024-29ನೇ ಅವಧಿಯ ತಾಲ್ಲೂಕು ಶಾಖೆ, ಯೋಜನಾ ಶಾಖೆ, ಜಿಲ್ಲಾ ಶಾಖೆಗಳ ನಿರ್ದೇಶಕರು ಮತ್ತು ಪದಾಧಿಕಾರಿಗಳ ಚುನಾವಣೆ ಹಾಗೂ ಬೆಂಗಳೂರು ನಗರ ಜಿಲ್ಲೆಯ ರಾಜ್ಯ ಪರಿಷತ್ ಸದಸ್ಯರ ಮತ್ತು ರಾಜ್ಯ ಸಂಘದ ಪದಾಧಿಕಾರಿಗಳ ಚುನಾವಣೆಯನ್ನು
ಸಂಘದ ಶಾಖೆಗಳಿಗೆ ಚನಾವಣಾ ವೇಳಾಪಟ್ಟಿ ಯಂತೆ ಚುನಾವಣೆಯನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..