ಬೆಂಗಳೂರು
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣ ರಾಜ್ಯದಲ್ಲಿ ದೊಡ್ಡ ಸಂಚಲನವನ್ನು ಸೃಷ್ಟಿಸಿರುವ ಸಂದರ್ಭದಲ್ಲೇ ಈಗ ಅವರಿಗೆ ಮತ್ತೊಂದು ಬೆಳವಣಿಗೆಯಲ್ಲಿ ಬಿಗ್ ಶಾಕ್ ಎದುರಾಗಿದೆ.ಸಿಡಿ ಪ್ರಕರಣದಲ್ಲಿ ಭಾರೀ ಮೊತ್ತದ ಹಣದ ವಹಿವಾಟು ನಡೆದಿದೆ ಎಂಬ ಹೇಳಿಕೆಗಳ ಹಿನ್ನೆಲೆಯಲ್ಲಿ ರಮೇಶ ಜಾರಕಿಹೊಳಿ ಅವರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ.

ಇತ್ತ SIT ಪ್ರಕರಣದ ತನಿಖೆ ಮುಂದುವರೆಸಿದೆ.ಇತ್ತ ಸದನದಲ್ಲಿ ಕಾಂಗ್ರೆಸ್ ಪ್ರತಿಭಟನೆ ಮುಂದುವರೆಸಿದೆ ಇವೆಲ್ಲದರ ನಡುವೆ ಇತ್ತ ಬೆಂಗಳೂರು ಸೆಂಟ್ರಲ್ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪದಾಧಿಕಾರಿಗಳು ಜಾರಿ ನಿರ್ದೇಶನಾಲಯಕ್ಕೆ ರಮೇಶ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ.ಸಿಡಿ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಸುಮಾರು 5 ರಿಂದ 20 ಕೋಟಿ ರೂಪಾಯಿ 100 ಕೋಟಿ ರೂಪಾಯಿವರೆಗೆ ಹಣದ ವಹಿವಾಟು ನಡೆದಿದೆ. ಯುವತಿಗೆ ಎರಡು ಫ್ಲಾಟ್ ಕೊಡಿಸಲಾಗಿದೆ. ಭಾರಿ ಮೊತ್ತದ ಹಣ ನೀಡಲಾಗಿದೆ ಎಂದು ರಮೇಶ ಜಾರಕಿಹೊಳಿ ಹೇಳಿದ್ದರೆನ್ನಲಾಗಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅನ್ವಯ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ದೂರು ನೀಡಲಾಗಿದ್ದು ಇದರಿಂದ ಮತ್ತೊಂದು ಬೆಳವಣಿಗೆಯಾಗಿದ್ದು ಮುಂದೇನು ಆಗುತ್ತದೆ ಎಂಬುದನ್ನು ಕಾದು ನೋಡಬೇಕು