ಬೆಂಗಳೂರು –
ನಾಳೆಯಿಂದ ರಾಜ್ಯದಲ್ಲಿ ಪ್ರೌಢಶಾಲೆ ತರಗತಿಗಳು ಪುನಾರಂಭ ಆಗಲಿದ್ದು ಈ ಒಂದು ಹಿನ್ನೆಲೆಯಲ್ಲಿ ರಾಜ್ಯ ದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಲಾಖೆಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿ ಗಳೊಂದಿಗೆ ಸಭೆ ನಡೆಯಿತು.

ರಾಜ್ಯದ ಎಲ್ಲ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಈ ಒಂದು ಸಭೆಯನ್ನು ಮಾಡಿ ವಿಡಿಯೋ ಕಾನ್ಫರೆ ನ್ಸ್‌ನ ಮೂಲಕ ಮಾಹಿತಿಯನ್ನು ಪಡೆದುಕೊಂಡು ಕೆಲವೊಂದಿಷ್ಟು ಸಲಹೆ ಸೂಚನೆಗಳನ್ನು ನೀಡಲಾಯಿತು ಹಾಗೆಯೇ ನಾಳೆಯಿಂದ ಆರಂಭವಾಗಲಿರುವ ಶಾಲೆಗಳ ಕುರಿತು ಸಲಹೆ ಸೂಚನೆಗಳನ್ನು ನೀಡಿ ಭದ್ರತೆ ಕುರಿತು ಖಡಕ್ ಸೂಚನೆ ನೀಡಿದರು