This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ರಾಜ್ಯದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮ ಪತ್ತೆ – ರಾಜ್ಯದ ಹಲವೆಡೆ ಪರೀಕ್ಷಾ ಕೇಂದ್ರಗಳಲ್ಲಿ ಪತ್ತೆಯಾದ ಅಕ್ರಮ ಹಲವರು ಬಂಧನ ಪಿಎಸ್ ಐ ಪರೀಕ್ಷೆ ಮಾಸುವ ಮುನ್ನವೇ ಮತ್ತೊಂದು ಅಕ್ರಮ ಬೆಳಕಿಗೆ…..

WhatsApp Group Join Now
Telegram Group Join Now

ಬೆಂಗಳೂರು

ರಾಜ್ಯದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮ ಪತ್ತೆ – ರಾಜ್ಯದ ಹಲವೆಡೆ ಪರೀಕ್ಷಾ ಕೇಂದ್ರಗಳಲ್ಲಿ ಪತ್ತೆಯಾದ ಅಕ್ರಮ ಹಲವರು ಬಂಧನ ಪಿಎಸ್ ಐ ಪರೀಕ್ಷೆ ಮಾಸುವ ಮುನ್ನವೇ ಮತ್ತೊಂದು ಅಕ್ರಮ ಬೆಳಕಿಗೆ. ಹೌದು ಪಿಎಸ್ ಐ ಪರೀಕ್ಷೆ ಯಲ್ಲಿ ನಡೆದ ಅಕ್ರಮ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮ ಬೆಳಕಿಗೆ ಬಂದಿದೆ.

ಹೌದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಮ್ಮಿ ಕೊಂಡಿದ್ದ ವಿವಿಧ ಹುದ್ದೆಗಳ ಪರೀಕ್ಷೆಯಲ್ಲಿ ಈ ಒಂದು ಅಕ್ರಮದ ವಾಸನೆ ಕಂಡು ಬಂದಿದೆ. ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿಕೊಂಡು ಅಕ್ರಮವಾಗಿ ಪರೀಕ್ಷೆ ಬರೆ ಯುತ್ತಿದ್ದವರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಕಲಬುರಗಿಯಲ್ಲಿ ಈ ಒಂದು ಘಟನೆ ಬೆಳಕಿಗೆ ಬಂದಿದ್ದು ಓರ್ವ ಅಭ್ಯರ್ಥಿಯನ್ನು ಪೊಲೀಸರು ಬಂಧಿಸಿದ್ದು ಆರು ಜನರನ್ನು ವಶಕ್ಕೆ ತಗೆದುಕೊಳ್ಳ ಲಾಗಿದೆ. ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ತ್ರಿಮೂರ್ತಿ ಮಾತ್ರವಲ್ಲದೆ ಪೊಲೀಸರು ಇನ್ನೂ ಮೂವರು ಅಭ್ಯರ್ಥಿಗಳು ಹಾಗೂ ಬ್ಲೂಟೂತ್ ಮೂಲಕ ಕೀ ಉತ್ತರ ಹೇಳಿ ಕೊಡುತ್ತಿದ್ದ ಮೂವ ರನ್ನು ಬಂಧನ ಮಾಡಿದ್ದಾರೆ.

ಇನ್ನೂ ಪಿಎಸ್‌ಐ ಪರೀಕ್ಷೆಯಲ್ಲಿನ ಹಗರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ವಿವಿಧ ನಿಗಮಗಳ ಖಾಲಿ ಹುದ್ದೆಗಳ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮವಾಗಿ ಪರೀಕ್ಷೆ ಬರೆಯುತ್ತಿದ್ದ ಓರ್ವ ಅಭ್ಯರ್ಥಿಯನ್ನು ಪೊಲೀಸರು ಬಂಧಿಸಿದ್ದು ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿವಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಅಭ್ಯರ್ಥಿ ತ್ರಿಮೂರ್ತಿ ಎಂಬಾತನನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ ಕನ್ನಡ ಇಂಗ್ಲಿಷ್ ಕಮ್ಯುನಿಕೇಷನ್ ಪರೀಕ್ಷೆ ನಡೆದಿದ್ದು ಈತ ಬ್ಲೂಟೂತ್ ಸಹಾಯದಿಂದ ಹೊರಗಿನವರಿಂದ ಕೀ ಉತ್ತರ ಪಡೆದು ಅಕ್ರಮ ಎಸಗುತ್ತಿದ್ದ ಬಂಧನದ ಬಳಿಕ ಆರೋಪಿ ತ್ರಿಮೂರ್ತಿಯನ್ನು ವೈದ್ಯರ ಬಳಿ ಕರೆದೊಯ್ದು ತಪಾಸಣೆ ಕೂಡಾ ನಡೆಸಲಾಗಿದೆ.

ಇನ್ನೋರ್ವ ಅಭ್ಯರ್ಥಿ ಅಭಿಷೇಕ್ ಎಂಬಾತನನ್ನು ಕೂಡಾ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಯೊಂದಿಗೆ ಅಕ್ರಮದ ದಾರಿಯ ಕುರಿತಂತೆ ಇವರಿಂದ ಕೆಲವೊಂದಿಷ್ಟು ಮಾಹಿತಿ ಗಳನ್ನು ಪಡೆದುಕೊಳ್ಳಲಾಗುತ್ತಿದೆ.ಇನ್ನೂ ಇತ್ತ ಅಫಜಲಪುರ ಪಟ್ಟಣದಲ್ಲೂ ಈ ಒಂದು ಅಕ್ರಮ ಕಂಡು ಬಂದಿದ್ದು ಮಾಹಾಂತೇಶ್ವರ ವಿದ್ಯಾವರ್ಧಕ ಸಂಘದ ಪರೀಕ್ಷಾ ಕೇಂದ್ರದಲ್ಲಿ ಇಬ್ಬರು ಅಭ್ಯರ್ಥಿ ಗಳು ಸೇರಿ ಐವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಪರೀಕ್ಷಾ ಕೇಂದ್ರದ ಹತ್ತಿರ ಕಾರು ಒಂದರಲ್ಲಿ ಕುಳಿತು ಬ್ಲೂಟೂತ್ ಮುಖಾಂತರ ಅಭ್ಯರ್ಥಿ ಗಳಿಗೆ ಕೀ ಉತ್ತರ ರವಾನಿಸುತ್ತಿರುವುದನ್ನು ಗಮನಿಸಿದ ಪೊಲೀಸರು ಉತ್ತರ ಹೇಳಿ ಕೊಡು ತ್ತಿದ್ದ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಮಾತ್ರ ವಲ್ಲದೆ ಅವರು ಕೊಟ್ಟ ಮಾಹಿತಿ ಅನ್ವಯ ಪರೀಕ್ಷೆ ಬರೆಯುತ್ತಿದ್ದ ಇನ್ನೂ ಇಬ್ಬರು ಅಭ್ಯರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಕಲಬುರಗಿ ಹಾಗೂ ಅಫಜಲಪುರನಲ್ಲಿ ಸಿಕ್ಕಿಬಿದ್ದ ಬಹುತೇಕರು ಅಫಜಲಪುರ ತಾಲೂಕಿನ ಸೊನ್ನ ಗ್ರಾಮದರಾಗಿದ್ದು ಪಿಎಸ್‌ಐ ಪರೀಕ್ಷೆ ಹಗರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್ ಕೂಡಾ ಇದೇ ಗ್ರಾಮದವರಾಗಿದ್ದಾರೆ ಅಕ್ರಮದ ಹಿಂದೆ ದೊಡ್ಡ ಜಾಲದ ಶಂಕೆ ವ್ಯಕ್ತವಾಗಿದೆ. 545 Psi ನೇಮಕಾತಿ ಪರೀಕ್ಷೆ ಅಕ್ರಮ ಹಗರಣದಲ್ಲಿ ಕಲಬುರಗಿ ರಾಜ್ಯದಾದ್ಯಂತ ಬಾರಿ ಸದ್ದು ಮಾಡಿತ್ತು.

ಸಿಐಡಿ ಪೊಲೀಸರು ಕೂಲಂಕುಶವಾಗಿ ತನಿಖೆ ನಡೆಸಿ 54ಕ್ಕೂ ಅಧಿಕ ಜನರನ್ನು ಕೂಡಾ ಬಂಧಿಸಿ ದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಇದೀಗ ಕರ್ನಾಟಕ ಪರೀಕ್ಷಾ ಪರಿಷತ್ ನಡೆಸುತ್ತಿರುವ ವಿವಿಧ ನಿಗಮಗಳ 750 ಹುದ್ದೆಗಳಿಗೆ ಪರಿಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಹಿನ್ನೆಲೆ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದು ತನಿಖೆ ನಂತರವಷ್ಟೇ ಈ ಒಂದು ಕುರಿತಂತೆ ಸತ್ಯಾಸತ್ಯತೆ ತಿಳಿದು ಬರಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk