This is the title of the web page
This is the title of the web page

Live Stream

[ytplayer id=’1198′]

October 2024
T F S S M T W
 12
3456789
10111213141516
17181920212223
24252627282930
31  

| Latest Version 8.0.1 |

State News

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ – 7ನೇ ವೇತನ ಆಯೋಗದ ಬೆನ್ನಲ್ಲೇ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ…..

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ – 7ನೇ ವೇತನ ಆಯೋಗದ ಬೆನ್ನಲ್ಲೇ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ…..
WhatsApp Group Join Now
Telegram Group Join Now

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದೆ ಹೌದು 7ನೇ ವೇತನ ಆಯೋಗದ ಜಾರಿಯ ಬೆನ್ನಲ್ಲೇ ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ 200 ರೂ.ಗಳಿಂದ ಮಾಸಿಕ 500 ರೂ.ಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಿದೆ.ಗ್ರೂಪ್‌ ಸಿ ಮತ್ತು ಗ್ರೂಪ್‌ ಡಿ ವೃಂದದ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ 200 ರೂ.ಗಳಿಂದ ಮಾಸಿಕ 500 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಆಗಸ್ಟ್‌ 1, 2024ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ.

5-09-2022ರ ಸರ್ಕಾರಿ ಆದೇಶದಲ್ಲಿ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (ಕೆಎಎಸ್‌‍ಎಸ್‌‍) ಅನುಷ್ಠಾನಗೊಳಿಸಲು ಆದೇಶ ಹೊರಡಿಸಲಾಗಿದೆ. 22-07-2024ರ ಸರ್ಕಾರಿ ಆದೇಶ ದಲ್ಲಿ ವೇತನ ಶ್ರೇಣಿಗಳ ಮತ್ತು ವೇತನಕ್ಕೆ ಹೊಂದಿಕೊಂ ಡಿರುವ ನಿರ್ದಿಷ್ಟ ಭತ್ಯೆಗಳ ಪರಿಷ್ಕರಣೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿ ಆದೇಶ ಹೊರಡಿ ಸಲಾಗಿದ್ದು ಪ್ರಮಾಣದಲ್ಲಿನ. 23-08-2024ರ ಸರ್ಕಾರಿ ಆದೇಶದಲ್ಲಿ ಪರಿಷ್ಕೃತ ವೇತನ ಶ್ರೇಣಿಗಳನ್ನು ಅನುಷ್ಠಾ ನ ಗೊಳಿಸಿ ವಿಸ್ತ್ರತವಾದ ಆದೇಶಿಸಲಾಗಿದೆ.

ಗ್ರೂಪ್‌ ಸಿ ಮತ್ತು ಗ್ರೂಪ್‌ ಡಿ ವೃಂದದ ರಾಜ್ಯ ಸರ್ಕಾರಿ ನೌಕರರಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆ ದರಗಳ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಿದೆ. ಅದರಂತೆ, ಸರ್ಕಾರ ದರ ಪರಿಷ್ಕರಿಸಿ ಆದೇಶ ಹೊರಡಿಸಿದೆ.
ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (ಕೆಎಎಸ್‌‍ಎಸ್‌‍) ಸೌಲಭ್ಯ ಅನುಷ್ಠಾನ ಆಗುವವರೆಗೆ ಈ ವೈದ್ಯಕೀಯ ಸೌಲಭ್ಯ ಲಭ್ಯವಿರಲಿದೆ.

ನಗದು ರಹಿತ ವೈದ್ಯಕೀಯ ಸೌಲಭ್ಯ ಯೋಜನೆ ಅನುಷ್ಠಾನಗೊಂಡ ನಂತರದಲ್ಲಿ ವೈದ್ಯಕೀಯ ಭತ್ಯೆಯ ಮಂಜೂರಾತಿಯ ಈ ಆದೇಶ ಜಾರಿಯಲ್ಲಿರುವುದು ಕೊನೆಗೊಳ್ಳುತ್ತದೆ. ಹಾಗೂ ನಗದುರಹಿತ (ಕೆಎಎಸ್‌‍ಎಸ್‌‍)ಯೋಜನೆಯು ಅನುಷ್ಠಾನಗೊಂಡ ಬಳಿಕ ಯಾವುದೇ ಸರ್ಕಾರಿ ನೌಕರ ಈ ಸೌಲಭ್ಯವನ್ನು ಪಡೆಯಲು ಅರ್ಹವಿರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk