ರಾಜ್ಯ ರೈತ ಸಮುದಾಯಕ್ಕೆ ಮತ್ತೊಂದು ‘ಶುಭ ಸುದ್ದಿ’ – ಕೃಷಿ ಸಂಜೀವಿನಿ ವಾಹನಗಳಿಗೆ BSY ಚಾಲನೆ

Suddi Sante Desk

ಬೆಂಗಳೂರು –

ರಾಜ್ಯ ಸರ್ಕಾರ ನಾಡಿನ ಅನ್ನದಾತ ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಕಾಲಕಾಲಕ್ಕೆ ಮಣ್ಣು, ಕೀಟ ರೋಗ, ನೀರು ಪರೀಕ್ಷೆ ಸೇರಿದಂತೆ ಇನ್ನಿತರ ತಾಂತ್ರಿಕ ನೆರವನ್ನು ಮನೆ ಬಾಗಿಲಿಗೆ ತಲುಪಿಸುವ ಮಹತ್ವದ ಕೃಷಿ ಸಂಜೀವಿನಿ ಹೆಸರಿನ ಸಂಚಾರಿ ಕೃಷಿ ವಾಹನಗಳಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಾಹನಗಳಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಅಧಿಕೃತವಾಗಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರೈತರ ಹೊಲಗಳಿಗೆ ಹೋಗಿ ಮಣ್ಣು, ನೀರು, ರೋಗ ಪರೀಕ್ಷೆ ಮಾಡುವ ವಾಹನ ಇದಾಗಿದೆ. ಸದ್ಯಕ್ಕೆ 40 ವಾಹನಗಳಿಗೆ ಚಾಲನೆ ನೀಡಲಾಗಿದೆ. ಈ ವಾಹನಗಳು ಯಾವ ರೀತಿಯಲ್ಲಿ ಕೆಲಸ ಕಾರ್ಯ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಬರುವ ದಿನಗಳಲ್ಲಿ ನೋಡಿಕೊಂಡು ವಾಹನಗಳ ಸಂಖ್ಯೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ರೈತರು ಕೃಷಿ ಸಂಜೀವಿನಿ ಸಹಾಯವಾಣಿ ‘155313’ ಉಚಿತವಾಗಿ ಈ ನಂಬರ್ ಗೆ ಕರೆ ಮಾಡಿದರೆ, ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಹೋಗುತ್ತದೆ.

ಆಗ ರೈತರು ತಮ್ಮ ಸಮಸ್ಯೆ ತಿಳಿಸಿ ಪರಿಹಾರ ಪಡೆಯಬಹುದಾಗಿದೆ. ಈ ಸಹಾಯವಾಣಿ ಆರೋಗ್ಯ ಇಲಾಖೆಯ ಆಂಬುಲೆನ್ಸ್ ನಿರ್ವಹಣಾ ರೀತಿ ಕೆಲಸ ಮಾಡಲಿದೆ.ಇನ್ನೂ ಈ ಒಂದು ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ,ಕೃಷಿ ಸಚಿವ ಬಿ ಸಿ ಪಾಟೀಲ್, ಸಚಿವ ಸೋಮಶೇಖರ್, ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿಗಳು ಇತರೆ ಸಿಬ್ಬಂದಿ ಗಳು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.