ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಪತಿ-ಪತ್ನಿ ಪ್ರಕರಣದಲ್ಲಿ ವರ್ಗಾವಣೆ’ಗೆ ಗ್ರೀನ್ ಸಿಗ್ನಲ್ ನೀಡಿ ಆದೇಶ ಮಾಡಿದ ರಾಜ್ಯ ಸರ್ಕಾರ…..

Suddi Sante Desk
ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಪತಿ-ಪತ್ನಿ ಪ್ರಕರಣದಲ್ಲಿ ವರ್ಗಾವಣೆ’ಗೆ ಗ್ರೀನ್ ಸಿಗ್ನಲ್ ನೀಡಿ ಆದೇಶ ಮಾಡಿದ ರಾಜ್ಯ ಸರ್ಕಾರ…..

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ.ಹೌದು ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ರಾಜ್ಯದ ಗ್ರೂಪ್ ಸಿ ಹಾಗೂ ಗ್ರೂಪ್-ಡಿ ವೃಂದದ ಸರ್ಕಾರಿ ನೌಕರರ ಪತಿ-ಪತ್ನಿ ಪ್ರಕರಣಗಳಲ್ಲಿ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹೌದು ಸರ್ಕಾರದ ಕೊನೆಯ ಅಧಿಕಾರವಧಿಯಲ್ಲಿ ಈ ಒಂದು ವರ್ಗಾವಣೆಗೆ ಅನುಕೂಲ ಕಲ್ಪಿಸಿ ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.

 

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.
ಕರ್ನಾಟಕ ಸಿವಿಲ್ ಸೇವಾ(ಸಾಮಾನ್ಯ ನೇಮಕಾತಿ)(ತಿದ್ದುಪಡಿ) ನಿಯಮಗಳು 2023.16ಎ ಸೇವೆಯೊಳಗೆ ವರ್ಗಾವಣೆ ಮೂಲಕ ನೇಮಕ ಮಾಡುವುದು ಎಂದು ತಿಳಿಸಿದ್ದು ಈ ನಿಯಮಗಳಲ್ಲಿ ಅಥವಾ ಯಾವುದೇ ಸೇವೆಯ ಅಥವಾ ಹುದ್ದೆಯ ಸಂಬಂಧದಲ್ಲಿ ರಚಿಸಲಾದ ವಿಶೇಷ ನೇಮಕಾತಿ ನಿಯಮಗಳಲ್ಲಿ ಏನೇ ಒಳಗೊಂಡಿದ್ದರೂ ಒಬ್ಬ ಇಲಾಖಾ ಮುಖ್ಯಸ್ಥರು ಸೇವೆಗೆ ಸಂಬಂಧಿಸಿದಂತೆ ಕಾರಣಗಳನ್ನು ಲಿಖಿತದಲ್ಲಿ ದಾಖಲಿಸಿ

ಮತ್ತು ಈ ಬಗ್ಗೆ ಸರ್ಕಾರವು ಹೊರಡಿಸುವ ಸಾಮಾನ್ಯ ಸೂಚನೆಗಳಿಗೆ ಒಳಪಟ್ಟು ಪತಿ-ಪತ್ನಿ ಇಬ್ಬರೂ ಸರ್ಕಾರಿ ಸೇವೆಯಲ್ಲಿರುವ ಪ್ರಕರಣಗ ಳಲ್ಲಿ ಮಾತ್ರ ಗ್ರೂಪ್-ಸಿ ಅಥವಾ ಗ್ರೂಪ್-ಡಿ ಸೇವೆಗೆ ಸೇರಿದ ಒಬ್ಬರು ಸದಸ್ಯರನ್ನು ಮತ್ತು ಈ ನಿಯಮಗಳಡಿ ಪತಿ ಅಥವಾ ಪತ್ನಿ ಇವರಲ್ಲಿ ಯಾರದರೊಬ್ಬರಿಂದ ಕೋರಿಕೆ ಬಂದಲ್ಲಿ ಹುದ್ದೆ ಯ ಒಂದು ಜೇಷ್ಠತಾ ಘಟಕದಿಂದ ಮತ್ತೊಂದು ಜೇಷ್ಠತಾ ಘಟಕದಲ್ಲಿನ ಅದೇ ಕೇಡರ್ ನ ಸಮಾನ ಹುದ್ದೆಗೆ ವರ್ಗಾವಣೆಗೆ ಸೂಚಿಸಿದೆ.

ಇನ್ನೂ ಈ ವರ್ಗಾವಣೆಗೆ ಒಬ್ಬ ಸರ್ಕಾರಿ ನೌಕರನು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸ್ಥಳದಲ್ಲಿ ಕನಿಷ್ಠ 7 ವರ್ಷ ಸೇವೆಯನ್ನು ಪೂರ್ಣ ಗೊಳಿಸಿರಬೇಕು. ವರ್ಗಾಯಿಸಬೇಕಾದ ಘಟಕ ಅಥವಾ ಸ್ಥಳದಲ್ಲಿ ಮಂಜೂರಾದ ಹುದ್ದೆಯು ಖಾಲಿ ಇರಬೇಕು. ಅಂತಹ ವರ್ಗಾವಣೆಯನ್ನು ಒಂದು ಕೇಡರ್ ನಿಂದ ಮತ್ತೊಂದು ಕೇಡರಿಗೆ ಮಾಡತಕ್ಕದಲ್ಲ ಎಂಬುದಾಗಿ ಷರತ್ತು ವಿಧಿಸಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.