ಧಾರವಾಡ –
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣಾ ವಿಚಾರ ಕುರಿತು JDS ಪಕ್ಷದ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.ಪಕ್ಷದ ಜಿಲ್ಲಾ ಅಧ್ಯಕ್ಷ ಗುರುರಾಜ ಹುಣಸಿಮರದ ಈ ಒಂದು ಎರಡನೇಯ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ

ಕಳೆದ ಎರಡು ದಿನಗಳ ಹಿಂದೆಯಷ್ಟೇ 19 ಜನರ ಮೊದಲನೇಯ ಪಟ್ಟಿಯನ್ನು ಬಿಡುಗಡೆ ಮಾಡಲಾ ಗಿತ್ತು ಅದರ ಬೆನ್ನಲ್ಲೇ ಈಗ ಎರಡನೇ ಪಟ್ಟಿಯಲ್ಲಿ ಒಟ್ಟು 16 ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ.

ಇನ್ನೂ ಪ್ರಮುಖವಾಗಿ ಅವಳಿ ನಗರದ ಒಟ್ಟು 82 ವಾರ್ಡ್ ಗಳಿಗೆ ಪಕ್ಷ ದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಕುರಿತು ಹೇಳಲಾಗಿದ್ದು ಹೀಗಾಗಿ ಸಧ್ಯ 35 ವಾರ್ಡ್ ಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡ ಲಾಗಿದ್ದು ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಅಂತಿಮ ಪಟ್ಟಿಯನ್ನು ಯಾವಾಗ ಬಿಡುಗಡೆ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು