ಬೆಂಗಳೂರು –
ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಪ್ರಕರಣದ ತನಿಖೆ ಮುಂದುವರೆದಿದೆ. ಇನ್ನೂ ಈ ಒಂದು ಪ್ರಕರಣದಲ್ಲಿ ಈಗಾಗಲೇ ಹತ್ತಕ್ಕೂ ಹೆಚ್ಚು ಜನರನ್ನು ಬಂಧನ ಮಾಡಲಾಗಿದೆ ಇನ್ನೂ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿ ಶಿವಲಿಂಗ ಪಾಟೀಲ್ ಎಂಬವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈತನನ್ನು ಬೆಳಗಾವಿಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರು ಮಾಡುವ ಕೋಚಿಂಗ್ ಕೇಂದ್ರವನ್ನು ನಡೆಸುತ್ತಿದ್ದು ವರ್ಷದ ಹಿಂದೆ ಈ ಕೇಂದ್ರ ಮುಚ್ಚಿತ್ತು ಎಂದು ಬೆಂಗಳೂರು ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ರಾಜ್ಯದಾದ್ಯಂತ ಕಳೆದ ಜನವರಿ 24 ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆ ಕೊನೆ ಗಳಿಕೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟು ಈಗ ಪರೀಕ್ಷೆ ಕೂಡಾ ಮುಗಿದಿದೆ.ಎಫ್‌ಡಿಎ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ನಂತರ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದ್ದು ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಲಾಗಿದ್ದು ತನಿಖೆ ಮುಂದುವರೆದಿದೆ.