ಅತಿಥಿ ಶಿಕ್ಷಕರ ನೇಮಕಾತಿ ಗೆ ಹೊರಬಿತ್ತು ಮತ್ತೊಂದು ಅಧಿಸೂಚನೆ – 5159 ಅತಿಥಿ ಶಿಕ್ಷಕರ ನೇಮಕಾತಿ ಗೆ ಆದೇಶ…..

Suddi Sante Desk

ಬೆಂಗಳೂರು –

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು ರಾಜ್ಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 5159 ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ.

2022-23ರ ನೇ ಸಾಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡುವವರಿಗೆ ಅಥವ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿ ಯವರೆಗೆ 5,078 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸರ್ಕಾರದ ಅನುಮತಿ ನೀಡಲಾಗಿರುತ್ತದೆ.

ಇನ್ನು ಸರ್ಕಾರಿ ಪ್ರೌಢಶಾಲೆಗಳಲ್ಲಿನ ವಿಷಯ ಶಿಕ್ಷಕರ ಖಾಲಿ ಹುದ್ದೆಗಳಿಗೆದುರಾಗಿ ಒಟ್ಟು1000 ಹೆಚ್ಚುವರಿ ಅತಿಥಿ ಶಿಕ್ಷಕ ರನ್ನು ನೇಮಕ ಮಾಡಲು ಅನುಮತಿ ನೀಡಲಾಗಿರುತ್ತದೆ. ಈ ಮೇಲಿನ ಅಂಶಗಳನ್ನು ಪರಿಗಣಿಸಿ ಇಲಾಖೆಯನಿಯ ಮಗಳು ಹಾಗೂ ಸುತ್ತೋಲೆಗಳ ಮಾರ್ಗದರ್ಶನದಡಿ ಒಟ್ಟು 5,159 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳು ಸರ್ಕಾರದ ಸಹಮತಿಯಂತೆ ಪತ್ರದಲ್ಲಿ ವಿಧಿಸಿರುವ ಷರತ್ತು ಗಳನ್ನೊಳಗೊಂಡಂತೆ ತಾಲೂಕುಗಳಿಗೆ ಅತಿಥಿ ಶಿಕ್ಷಕರನ್ನು ಹಂಚಿಕೆಮಾಡಿ ಅನುಮತಿ ನೀಡಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.