ಬೆಂಗಳೂರು –
15 ಸಾವಿರ ಶಿಕ್ಷಕರ ಹುದ್ದೆಯ ನೇಮಕಾತಿಯಲ್ಲಿ ಆಯ್ಕೆ ಯಾಗದೇ ಇನ್ನೂ 3,500ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಲ್ಲದೇ ಬಾಕಿ ಉಳಿದಿದ್ದು ಆ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಬಾಕಿ ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತಿದೆ ಎನ್ನಲಾಗುತ್ತಿರುವ ಬೆನ್ನಲ್ಲೇ ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದಂತವರಿಗೆ ಮತ್ತೆ ಟಿಇಟಿ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮಾಹಿತಿ ನೀಡಿದ್ದು, 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ( KAR-TET 2022) ಕ್ಕೆ ಇಲಾಖೆಯ ವೆಬ್ ಸೈಟ್ www.schooleducation.kar.nic.in ಜಾಲತಾಣ ದಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ ಅರ್ಹ ಅಭ್ಯರ್ಥಿಗಳು ಟಿಇಟಿ-2022ರ ಪರೀಕ್ಷೆಗೆ (KARTET-2022 Exam)ಆನ್ ಲೈನ್ (Online) ಮೂಲಕ ಅರ್ಜಿಯನ್ನು ದಿನಾಂಕ 01-09-2022ರಿಂದ 30-09-2022ರವರೆಗೆ ಸಲ್ಲಿಸಬಹುದಾಗಿದೆ.ಅರ್ಜಿ ಶುಲ್ಕ, ವಯೋಮಿತಿ ಸೇರಿದಂತೆ ವಿವಿಧ ಮಾಹಿತಿಗಳಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಸೂಚಿಸಿದೆ.