ಅಡುಗೆ ಸಹಾಯಕರ ನೇಮಕಾತಿಗೆ ಅರ್ಜಿ ಆಹ್ವಾನ – ಆಸಕ್ತರು ಅರ್ಜಿ ಸಲ್ಲಿಸಬಹುದು…..

Suddi Sante Desk

ಕೊಪ್ಪಳ –

ವಿವಿಧ ಸರ್ಕಾರಿ ಶಾಲೆಗಳಲ್ಲಿ ಅಕ್ಷರದಾಸೋಹ ಯೋಜನೆ ಅಡಿಯಲ್ಲಿ ಮಧ್ಯಾಹ್ನದ ಬಿಸಿ ಊಟದ ಅಡುಗೆ ಸಹಾ ಯಕ ಸಿಬ್ಬಂದಿಗಳ ತಾತ್ಕಾಲಿಕವಾಗಿ ನೇಮಕಾತಿ ಮಾಡಿ ಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.ಹೌದು ಕೊಪ್ಪಳ ದ ನಗರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ಸರ್ಕಾರಿ ಶಾಲೆಗ ಳಲ್ಲಿ ಅಕ್ಷರದಾಸೋಹ ಯೋಜನೆಅಡಿಯಲ್ಲಿ ಮಧ್ಯಾಹ್ನದ ಬಿಸಿ ಊಟದ ಅಡುಗೆ ಸಹಾಯಕ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು ಅದರಲ್ಲಿ ವಯೋನಿವೃತ್ತಿ ಹೊಂದಿದ ಸಿಬ್ಬಂದಿಗಳನ್ನು ಸರ್ಕಾರದ ಆದೇಶದಂತೆ ಆಯಾ ಶಾಲೆ ಗಳ ಮುಖ್ಯೋಪಾದ್ಯಯರು ವಯೋನಿವೃತ್ತಿ ಹೊಂದಿದ ಅಡುಗೆ ಸಹಾಯಕ ಸಿಬ್ಬಂದಿಗಳನ್ನು ಸೇವೆಯಿಂದ ಬಿಡು ಗಡೆಗೊಳಿಸಿರುತ್ತಾರೆ.ಶಾಲೆಯ ಮುಖ್ಯೋಪಾದ್ಯಯರು ನಗರಸಭೆ ಕಾರ್ಯಾಲಯಕ್ಕೆ ಪತ್ರ ಬರೆದು ಖಾಲಿಯಾದ ಹುದ್ದೆಗಳ ಭರ್ತಿ ಮಾಡಿಕೊಳ್ಳುವಂತೆ ಕೋರಿರುತ್ತಾರೆ. ಅದರಂತೆ ಕೊಪ್ಪಳ ನಗರದ ಸರಕಾರಿ ಕೇಂದ್ರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ (ಸಿ.ಪಿ.ಎಸ್)ವಿಜಯನಗರ ಆಶ್ರಯ ಕಾಲೋನಿಯ ಸರಕಾರಿ ಕಿರಿಯ ಪ್ರಾಧಮಿಕ ಶಾಲೆ ಕೊಟಗಾರಗೇರಾ ಸರಕಾರಿ ಉರ್ದು ಹಿರಿಯ ಪ್ರಾಧಮಿಕ ಶಾಲೆ ಗಾಂಧಿಸ್ಮಾರಕ ಸರಕಾರಿ ಹಿರಿಯ ಪ್ರಾಧಮಿಕ ಶಾಲೆ ಹಾಗೂ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಮುಖ್ಯ ಅಡುಗೆಯವರು ಹಾಗೂ ಅಡುಗೆ ಸಹಾ ಯಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾ ಗುತ್ತಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ನಗರದ ಖಾಯಂ ನಿವಾಸಿಯಾಗಿರಬೇಕು.ವಾರ್ಡ್‌ ನ ಮತದಾರರ ಯಾದಿ ಯಲ್ಲಿ ಅರ್ಜಿದಾರರ ಹೆಸರು ಸೇರ್ಪಡೆಯಾಗಿರಬೇಕು. ಚಾಲ್ತಿ ಸಾಲಿನ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗ ಳನ್ನು ಲಗತ್ತಿಸಬೇಕು.ಇತ್ತೀಚಿನ ಭಾವಚಿತ್ರ ಹೊಂದಿರ ಬೇಕು.ಕುಟುಂಬದ ಪಡಿತರ ಚೀಟಿ, ಆಧಾರ್ ಕಾರ್ಡ ಹಾಗೂ ಚುನಾವಣಾ ಆಯೋಗದ ಗುರುತಿನ ಚೀಟಿಗ ಳೊಂದಿಗೆ ನಿಗದಿತ ನಮೂನೆಯಲ್ಲಿ ಜೂನ್ 24ರ ಒಳ ಗಾಗಿ ನಗರಸಭೆ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಬ ಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.