ಹುಬ್ಬಳ್ಳಿ –
ಏಪ್ರಿಲ್ 26 ರಜೆ ಘೋಷಣೆ ಯಾರು ಯಾರಿಗೆ ರಾಜ್ಯದಲ್ಲಿ ರಜೆ ಗೊತ್ತಾ ಕಂಪ್ಲೀಟ್ ಮಾಹಿತಿ ಹೌದು ಏಪ್ರಿಲ್ 26, ಶುಕ್ರವಾರದಂದು ಕರ್ನಾಟ ಕದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.
ಬ್ಯಾಂಕುಗಳಿಗೆ ರಜೆ ಘೋಷಿಸಲಾಗಿದೆ. ಶಾಲಾ ಕಾಲೇಜು ಹಾಗೂ ಇತರ ಶಿಕ್ಷಣ ಸಂಸ್ಥೆಗಳಿಗೂ ರಜೆ ಇದೆ.ಬಸ್, ರೈಲು ಇತ್ಯಾದಿ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಸರ್ಕಾರಿ ಕಚೇರಿಗಳಿಗೆ ರಜೆ ಇರುತ್ತದೆ. ಖಾಸಗಿ ಕಂಪನಿಗಳಿಗೆ ಕಡ್ಡಾಯ ರಜೆ ಇಲ್ಲ ಆದರೆ ಮತದಾನಕ್ಕೆ ಅರ್ಹ ಇರುವ ಉದ್ಯೋಗಿಗೆ ಮತದಾನಕ್ಕೆ ಅನುಕೂಲ ಮಾಡಿ ಕೊಡಬೇಕಾಗುತ್ತದೆ.
ಏಪ್ರಿಲ್ 26ರಂದು ಕರ್ನಾಟಕವೂ ಸೇರಿದಂತೆ 13 ರಾಜ್ಯಗಳಲ್ಲಿ ನಡೆಯಲಿರುವ ಎರಡನೇ ಹಂತದ ಚುನಾವಣೆ ಗೆ ಮತದಾರರು ಮತ ಚಲಾಯಿಸಲಿದ್ದಾರೆ ಕರ್ನಾಟಕದ 28 ಲೋಕ ಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದರಲ್ಲಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳೂ ಒಳಗೊಂಡಿವೆ.
ಮತದಾನದ ದಿನದಂದು ಮತದಾನವನ್ನು ಕಡ್ಡಾಯವಾಗಿ ಮಾಡಬೇಕೆಂಬ ಅಲಿಖಿತ ನಿಯಮ ಇದೆ ಅದರಂತೆ ಹೆಚ್ಚಿನ ಸಂಖ್ಯೆಯಲ್ಲಿ ಅಂದು ರಜೆ ಇರುತ್ತದೆ.ಅಗತ್ಯ ಸೇವೆ ಹೊರತು ಪಡಿಸಿ ಉಳಿದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಏಪ್ರಿಲ್ 26, ಶುಕ್ರವಾರ ರಜೆ ಇರುತ್ತದೆ.
ಬ್ಯಾಂಕುಗಳಿಗೆ ರಜೆ ಶಾಲೆ,ಕಾಲೇಜುಗಳಿಗೆ ರಜೆ
ಹೈಕೋರ್ಟ್ ನ್ಯಾಯಪೀಠಗಳಿಗೆ ರಜೆ.ಆಸ್ಪತ್ರೆ, ಅಂಗಡಿ ಮುಂಗಟ್ಟುಗಳು ತೆರೆದಿರುತ್ತವೆ ಬಸ್, ರೈಲು ಇತ್ಯಾದಿ ಸಾರಿಗೆ ವಾಹನಗಳ ಸಂಚಾರ ಇರುತ್ತದೆ ಖಾಸಗಿ ಸಂಸ್ಥೆಗಳು ತೆರೆದಿರುತ್ತವೆ
ಇಲ್ಲಿ ಖಾಸಗಿ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ವೋಟಿಂಗ್ ಮಾಡಲು ಅನುಕೂಲ ಮಾಡಿಕೊಡ ಬೇಕಾಗುತ್ತದೆ. ಉದ್ಯೋಗಿಗಳು ವೋಟ್ ಹಾಕಿ ಕಚೇರಿ ಹೋಗಬಹುದು.ಮೊದಲ ಪಾಳಿ ಇದ್ದರೆ ಕಚೇರಿ ಕೆಲಸ ಮುಗಿಸಿ ಸಂಜೆ ವೋಟ್ ಹಾಕಬ ಹುದು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..