ಬೆಂಗಳೂರು –
ಮಹತ್ವದ ಬೆಳವಣಿಗೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ರವಾನಿಸಿದ್ದಾರೆ. ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಪಕ್ಷದ ಸಂಘಟನೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದ್ದ ಅರವಿಂದ್ ಲಿಂಬಾವಳಿ ಅವರ ಅನುಪಸ್ಥಿತಿ ರಾಜ್ಯ ಘಟಕದಲ್ಲಿ ಎದ್ದು ಕಾಣಲಿದೆ. ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ಕಟೀಲ್ ಅವರಿಗೆ ಕಳುಹಿಸಿರುವುದಾಗಿ ಅರವಿಂದ್ ಲಿಂಬಾವಳಿ ತಿಳಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯಲ್ಲಿ ಒಬ್ಬ ವ್ಯಕ್ತಿ, ಒಂದು ಹುದ್ದೆ ಎನ್ನುವ ಸಿದ್ಧಾಂತವಿದೆ.ಹೀಗಾಗಿ ಸಚಿವನಾಗಿ ಅಧಿಕಾರ ವಹಿಸಿಕೊಂಡಿದ್ದೇನೆ. ಹೀಗಾಗಿ ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮದಂತೆ ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ.