ಬೆಂಗಳೂರು –
ರಾಜ್ಯದ ಸರ್ಕಾರಿ ನೌಕರರಿಗೆ ಕೊನೆಗೂ ಆರೋಗ್ಯ ಸಂಜೀವಿನಿ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ಮಾಡಿದೆ.ಈ ಕುರಿತಂತೆ ಆದೇಶ ವನ್ನು ಮಾಡಿ ಜಾರಿಗೆ ಮಾಡಲಾಗಿದೆ.
7ನೇ ವೇತನ ಆಯೋಗದ ಅನುಷ್ಠಾನ NPS ರದ್ದುಗೊಳಿಸಿ, OPS ಜಾರಿ ಹಾಗೂ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿತ್ತು
ಪ್ರತಿಭಟನೆಯಿಂದಾಗಿ ಸರ್ಕಾರ ಒಂದೇ ದಿನದಲ್ಲಿ ಮಧ್ಯಂತರ ಪರಿಹಾರವನ್ನು ಘೋಷಣೆ ಮಾಡಿತ್ತು ಈಗ ಮತ್ತೊಂದು ಆದೇಶವನ್ನು ಮಾಡಿದೆ.
ಒಪಿಎಸ್ ಜಾರಿ ಸಂಬಂಧ ಸಮಿತಿ ರಚಿಸಲಾಗಿತ್ತು ಇಂದು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿ ಪರಿಷ್ಕೃತ ಆದೇಶವನ್ನು ಹೊರಡಿಸಿದೆ.ಈ ಕುರಿತಂತೆ ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡಾವಳಿ ಯನ್ನು ಹೊರಡಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸಲು ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಪರಿಷ್ಕೃತ ಆದೇಶವನ್ನು ಹೊರಡಿ ಸಿದ್ದಾರೆ.
ಸರ್ಕಾರ ಹೊರಡಿಸಿರುವಂತ ಆದೇಶದಲ್ಲಿ ಸಂಜೀವಿನಿ ಯೋಜನೆಯಡಿ ಸರ್ಕಾರಿ ನೌಕರನ ಪತಿ ಅಥವಾ ಪತ್ನಿ, ತಂದೆ ಮತ್ತು ತಾಯಿ (ಮಲತಾಯಿನ್ನೊಳಗೊಂಡಂತೆ)ಅವರು ಸರ್ಕಾರಿ ನೌಕರನೊಂದಿಗೆ ಸಾಮಾನ್ಯವಾಗಿ ವಾಸವಾಗಿ ದ್ದಲ್ಲಿ ಮತ್ತು ಅವರ ಒಟ್ಟು ಮಾಸಿಕ ಆದಾಯ ಕನಿಷ್ಠ ಕುಟುಂಬ ಪಿಂಚಣಿ( ರೂ.8,500) ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರದಿದ್ದಲ್ಲಿ ಯೋಜನೆಗೆ ಅರ್ಹರು ಎಂದಿದೆ.
ಸರ್ಕಾರಿ ನೌಕರನ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿರುವ ಮಕ್ಕಳು. ಇವರಲ್ಲಿ ದತ್ತು ಪಡೆ ಮಕ್ಕಳು ಮತ್ತು ಮಲ ಮಕ್ಕಳನ್ನೊಳಗೊಂ ಡಂತೆ ಕುಟುಂಬದ ಸದಸ್ಯರನ್ನು ಯೋಜನೆಯಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..