ಹುಬ್ಬಳ್ಳಿ –
ಹುಬ್ಬಳ್ಳಿಯ ಗಾರ್ಬೆಜ್ ಯಾರ್ಡ್ ಗೆ ಶಾಶ್ವತ ಮುಕ್ತಿ ನೀಡಲು ಮುಂದಾದ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನಿತಿನ ಇಂಡಿ – ಬೆಂಕಿಯನ್ನು ನಿಯಂತ್ರಣ ಮಾಡಿ ಟೆಂಡರ್ ಕುರಿತಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ ಅಧ್ಯಕ್ಷರ ನೇತ್ರತ್ವದಲ್ಲಿನ ಟೀಮ್
ಹುಬ್ಬಳ್ಳಿಯ ಹೊರವಲಯದಲ್ಲಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಗಾರ್ಬೇಜ್ ಯಾರ್ಡ್ ಗೆ ಮಹಾನಗರ ಪಾಲಿಕೆಯ ಸಾರ್ವ ಜನಿಕ ಆರೋಗ್ಯ ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ನಿತಿನ ಇಂಡಿ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಹೌದು ಗಾರ್ಬೇಜ್ ಯಾರ್ಡ್ ನಲ್ಲಿನ ಸಮಸ್ಯೆಗಳ ಕುರಿತಂತೆ ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಸಮಿತಿಯ ಅಧ್ಯಕ್ಷ ನಿತಿನ ಇಂಡಿ ನೇತ್ರತ್ವದಲ್ಲಿನ ಟೀಮ್ ಈ ಒಂದು ಘಟಕಕ್ಕೆ ಭೇಟಿ ನೀಡಿ ಪರಿ ಶೀಲನೆ ಮಾಡಿದರು.ಕಾರವಾರ ರಸ್ತೆಯಲ್ಲಿರುವ ಈ ಒಂದು ಘಟಕಕ್ಕೆ ಟೀಮ್ ಭೇಟಿ ನೀಡಿ ಅಧಿಕಾ ರಿಗಳೊಂದಿಗೆ ಚರ್ಚಿಸಿದರು. ಕಾರವಾರ ರಸ್ತೆ ಯಲ್ಲಿರುವ
ಘನ ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ಮೀಥೇನ್ ಗ್ಯಾಸ್ ಉತ್ಪತ್ತಿಯಾಗುವುದರಿಂದ ಆಕಸ್ಮಿಕವಾಗಿ ಬೆಂಕಿ ತಗಲಿದರ ಬಗ್ಗೆ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಯಿತು ಹಾಗೂ ಲೆಗಸಿ ವೇಸ್ಟ್ ಟೆಂಡರ್ ಪ್ರಕ್ರಿಯೆ ಬಗ್ಗೆ ಅಧಿಕಾರಿಗಳೊಂದಿಗೆ ಸಂವಾದ ಮಾಡಿ ಟೆಂಡರ್ ಪ್ರಕ್ರಿಯೆಯನ್ನು ತುರ್ತಾಗಿ ಮುಗಿಸಿಕೊಡಲು ಅಧಿಕಾರಿಗಳಿಗೆ ಸಮಿತಿಯ ಅಧ್ಯಕ್ಷ ನಿತಿನ ಇಂಡಿ ಯವರು ಸೂಚಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆರೋಗ್ಯ ಸ್ಥಾಯಿ ಸಮಿತಿಯ ಸದಸ್ಯರು ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಅಭಿಯಂತರರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..