ಭಟ್ಕಳ –
ಮುರುಡೇಶ್ವರದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಮುಖ್ಯ ಶಿಕ್ಷಕಿ ಸೇರಿ 6 ಮಂದಿ ವಿರುದ್ಧ ಸುಮೊಟೋ ಕೇಸ್ ದಾಖಲಾಗಿದ್ದು, ಇದರ ಬೆನ್ನಲ್ಲೇ ಇದೀಗ ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕಿ ಶಶಿಕಲಾ (40) ಎಸ್ ವಿಶ್ವನಾಥ್ (27) ಸಿ ಎನ್ ಶಾರದಮ್ಮ (37), ಸುನೀಲ್ (33), ಚೌಡಪ್ಪ (34) ಹಾಗೂ ಕೆ ನರೇಶ (30) ಸೇರಿ ಆರು ಮಂದಿ ವಿರುದ್ಧ ಮುರುಡೇಶ್ವರ ಪೊಲೀಸರು ಸುಮೋಟೋ ಕೇಸ್ ದಾಖಲಿದ್ದು ಇದೀಗ ಅವರನ್ನು ವಶಕ್ಕೆ ಪಡೆದಿದ್ದಾರೆ
ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾ ಗಿದ್ದು, ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ಬೋಟ್ ಮೂಲಕ ಮೂವರ ಮೃತ ದೇಹವನ್ನು ಹೊರತೆಗೆದಿದ್ದಾರೆ.ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿದ್ದ 15 ವರ್ಷದ ದೀಕ್ಷಾ, ಲಾವಣ್ಯ, ವಂದನಾ ಎಂಬ ಮೂವರು ವಿದ್ಯಾರ್ಥಿನಿಯರು ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ಮೊದಲು ಓರ್ವ ವಿದ್ಯಾರ್ಥಿನಿ ಶ್ರವಂತಿ (15) ಶವ ಪತ್ತೆಯಾಗಿತ್ತು
,ಮೃತ ವಿದ್ಯಾರ್ಥಿನಿಯರ ಕುಟುಂದವರಿಗೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾ ಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಭಟ್ಕಳ…..