ಹುಬ್ಬಳ್ಳಿ-
ರಾಜ್ಯದಲ್ಲಿ ಮರಾಠಿ ಪ್ರಾಧಿಕಾರ ರಚನೆ ವಿರೋಧಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಬೆಂಬಲಿಸಿ ಹುಬ್ಬಳ್ಳಿಯಲ್ಲಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆಯನ್ನು ಮಾಡಿದರು.
ಇದೇ ವೇಳೆ ಮರಾಠ ಪ್ರಾಧಿಕಾರ ರಚನೆಗೆ ಒಪ್ಪಿಗೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ನಾಯಕರಾದ ಬಸವನಗೌಡ ಪಾಟೀಲ ಯತ್ನಾಳ್ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ಸೇರಿದಂತೆ ಹಲವು ನಾಯಕರ ಭಾವಚಿತ್ರ ಕ್ಕೆ ಬೆಂಕಿ ಹಚ್ಚಿ ಆಕ್ರೋಶವನ್ನು ವ್ಯಕ್ತಪಡಿಸಿದರು.
ಹೋರಾಟಗಾರರು ಇದೇ ವೇಳೆ ರಸ್ತೆ ತಡೆ ಮಾಡಲು ಮುಂದಾದ ಕರವೇ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೇ ಪಡೆದರು. 20 ಕ್ಕೂ ಹೆಚ್ಚು ಪ್ರತಿಭಟನಾ ನಿರತ ಕರವೇ ಮುಖಂಡರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದುಕೊಂಡು ಹೋದರು.