ಶಿವಮೊಗ್ಗ –
ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಅವರ ಪುತ್ರ ಬಸವೇಶ ನನ್ನು ಪೊಲೀಸರು ಬಂಧಿಸಿದ್ದಾರೆ.ಫೆಬ್ರವರಿ 28 ರಂದು ರಾತ್ರಿ ಭದ್ರಾವತಿಯಲ್ಲಿ ನಡೆದ ಕಬಡ್ಡಿ ಪಂದ್ಯಾವಳಿ ಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವೇಶ್ ನನ್ನು ಬಂಧಿಸಲಾಗಿದೆ.
ಶಾಸಕ ಸಂಗಮೇಶ್ ಮತ್ತು ಅವರ ಕುಟುಂಬದವರ ವಿರುದ್ಧ ಕೇಸು ದಾಖಲಿಸಲಾಗಿದ್ದು ಇದನ್ನು ವಿರೋಧಿಸಿ ಶಾಸಕ ಸಂಗಮೇಶ್ ವಿಧಾನಸಭೆಯಲ್ಲಿ ಅಂಗಿ ಬಿಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಅವರನ್ನು ಸದನದಿಂದ ಸಸ್ಪೆಂಡ್ ಮಾಡಲಾಗಿತ್ತು.
ಭದ್ರಾವತಿ ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಗಮೇಶ್ ಪುತ್ರ ಅಜ್ಞಾತ ಸ್ಥಳದಲ್ಲಿ ಇರುವುದನ್ನು ಖಚಿತಪಡಿಸಿಕೊಂಡ ಪೊಲೀಸರು ನಿನ್ನೆ ತಡರಾತ್ರಿ ಬಂಧಿಸಿದ್ದಾರೆ. ಕೊಲೆ ಬೆದರಿಕೆ, ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಇದುವರೆಗೆ 15 ಮಂದಿಯನ್ನು ಬಂಧಿಸಲಾಗಿದೆ.ಬಸವೇಶ್ ನನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.