ಹುಬ್ಬಳ್ಳಿ –
ಏಪ್ರಿಲ್ 13 ರಂದು ಹುಬ್ಬಳ್ಳಿಯಲ್ಲಿ ಎಸ್‌ಟಿ ಮೋರ್ಚಾ ದಿಂದ ಮುನ್ನಡೆ ಸಮಾವೇಶ ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಘಟಕದ ಪದಾಧಿಕಾರಿ ಅರುಣಕುಮಾರ ಹುದಲಿ ಹೇಳಿದರು. ಹುಬ್ಬಳ್ಳಿ ಯಲ್ಲಿ ಮಾತನಾಡಿದ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಹಾಗೂ ಗ್ರಾಮಾಂತರ ಬಿಜೆಪಿ ಎಸ್‌ಟಿ ಮೋರ್ಚಾ ವತಿಯಿಂದ ನಗರದ ಗೋಕುಲ ರಸ್ತೆಯ ಗೋಕುಲ ಗಾರ್ಡನ್‌ನಲ್ಲಿ ಈ ಒಂದು ಸಮಾವೇಶ ನಡೆಯಲಿದೆ ಎಂದರು.
ಏಪ್ರಿಲ್ 13ರಂದು ಬೆಳಿಗ್ಗೆ 11ಗಂಟೆಗೆ ಮಹರ್ಷಿ ವಾಲ್ಮೀಕಿ’ ಹೆಸರಿನ ವೇದಿಕೆ ಅಡಿಯಲ್ಲಿ ನಡೆಯುವ ಈ ಸಮಾವೇಶದಲ್ಲಿ 10 ಸಾವಿರಕ್ಕೂ ಅಧಿಕ ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾ ಯಕ್ಕೆ ಸೇರಿದ ಜನರು ಭಾಗವಹಿಸುವರು. ಇವ ರೊಂದಿಗೆ ಪಕ್ಷದ ಕಾರ್ಯಕರ್ತರು, ಮುಖಂಡರು ಭಾಗವಹಿಸುವರು ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಿಜೆಪಿ ಆಡಳಿ ತದ ಅವಧಿಯಲ್ಲಿ ಎಸ್‌ಟಿ ಸಮುದಾಯಕ್ಕೆ ನೀಡಿದ ಸೌಲಭ್ಯಗಳ ಕುರಿತು ಸಮಾವೇಶದಲ್ಲಿ ಚರ್ಚಿಸಲಾಗುವುದು.ಬಿಜೆಪಿ ರಾಜ್ಯ ಎಸ್‌ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತ ಅವರು ಸಮಾವೇಶದ ಅಧ್ಯಕ್ಷತೆ ವಹಿಸುವರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಶಂಕರ ಪಾಟೀಲ ಮುನೇನಕೊಪ್ಪ, ಅಶೋಕ ಕಾಟವೆ ಹಾಗೂ ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಹಾಗೂ ಗ್ರಾಮಾಂತರ ಬಿಜೆಪಿ ಎಸ್‌ಟಿ ಮೋರ್ಚಾ ದ ಪದಾಧಿಕಾರಿಗಳು ಭಾಗವಹಿಸುವರು ಎಂದರು
ಕೇಂದ್ರ ಸರ್ಕಾರ ಹಾಗೂ ರಾಜ್ಯದಲ್ಲಿ ಈ ಹಿಂದೆ ಆಡಳಿತ ನಡೆಸಿದ ಬಿಜೆಪಿ ಸರ್ಕಾರಗಳು ಎಸ್‌ಟಿ ಸಮುದಾಯದ ಕಲ್ಯಾಣಕ್ಕಾಗಿ ಹಲವು ಯೋಜ ನೆಗಳನ್ನು ಜಾರಿಗೊಳಿಸುವ ಮೂಲಕ ಸಮುದಾ ಯದ ಜನರ ಪ್ರಗತಿಗೆ ಸಹಕರಿಸಿವೆ.ಈ ಬಗ್ಗೆ ಸಮಾವೇಶದಲ್ಲಿ ವಿವರವಾಗಿ ಚರ್ಚೆ ನಡೆಸಲಾ ಗುವುದು ಎಂದರು.
ಬಿಜೆಪಿ ಎಸ್‌ಟಿ ಮೋರ್ಚಾದ ರಾಜ್ಯ ಪದಾಧಿ ಕಾರಿಗಳಾದ ಮಣಿಕಂಠ ಎಸ್ ಶ್ಯಾಗೋಟಿ ಸಂತೋಷ ತಳವಾರ, ಪುಂಡಲಿಕ ತಳವಾರ, ಲಕ್ಷ್ಮಣ ಮೇಗಿನ ಮನಿ, ಅಶೋಕ ವಾಲ್ಮೀಕಿ, ದತ್ತಮೂರ್ತಿ ಕುಲಕರ್ಣಿ, ಯಲ್ಲಪ್ಪ ದಂದೂರ, ಮಾರುತಿ, ಸಿದ್ದಪ್ಪ ವಾಲೀಕಾರ, ದೇವೇಂದ್ರಪ್ಪ ಪಾಟೀಲ ಸೇರಿದಂತೆ ಹಲವರು ಈ ಒಂದು ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..