ದೆಹಲಿ –
ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠಾ’ದ ಹಿನ್ನೆಲೆಯಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಕಚೇರಿ ಗಳಿಗೆ ಅರ್ಧ ದಿನ ರಜೆಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ ಹೌದು ಈ ಒಂದು ಸಂದರ್ಭದಲ್ಲಿ ಜನವರಿ 22 ರಂದು ದೆಹಲಿಯ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನದ ರಜೆಯ ಅಧಿಕೃತ ಆದೇಶಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅನು ಮೋದನೆ ನೀಡಿದ್ದಾರೆ.
ರಾಜ್ ನಿವಾಸ್ ಅಧಿಕಾರಿಗಳ ಪ್ರಕಾರ, ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆ ಸಮಾರಂಭದ ಕಾರಣ ಜನವರಿ 22 ರಂದು ಎಲ್ಲಾ ದೆಹಲಿ ಸರ್ಕಾರಿ ಕಚೇರಿಗಳು, ನಾಗರಿಕ ಸಂಸ್ಥೆಗಳು ಮತ್ತು ಇತರ ಉದ್ಯಮಗ ಳಿಗೆ ಅರ್ಧ ದಿನದ ರಜೆಯನ್ನು ಎಲ್-ಜಿ ಅನು ಮೋದಿಸಿದ್ದಾರೆ.
ದೆಹಲಿಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ಜನವರಿ 22 ರಂದು ಮಧ್ಯಾಹ್ನ 2.30 ರವರೆಗೆ ಮುಚ್ಚಲ್ಪಡುತ್ತವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆದೇಶ ಹೊರ ಡಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ನವದೆಹಲಿ…..