This is the title of the web page
This is the title of the web page

Live Stream

[ytplayer id=’1198′]

December 2024
T F S S M T W
 1234
567891011
12131415161718
19202122232425
262728293031  

| Latest Version 8.0.1 |

State News

ದೀಪಾವಳಿ ಹಬ್ಬದ ಬಗ್ಗೆ ನಿಮಗೆಷ್ಟು ಗೋತ್ತು

WhatsApp Group Join Now
Telegram Group Join Now

ದೀಪಾವಳಿ ಹಬ್ಬದ ಬಗ್ಗೆ ನಿಮಗೇಸ್ಟು ಗೋತ್ತು

ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಸಂಸ್ಕ್ರತಿಯಲ್ಲಿ ಶ್ರೀಮಂತಿಕೆಯನ್ನು ಹೊಂದಿರುವ ನಮ್ಮ ದೇಶ ಭಾರತ. ದೇಶದ ಮೂಲೆ ಮೂಲೆಗಳಲ್ಲಿ ಬೇರೆ ಬೇರೆ ಸಮುದಾಯ ಜನಾಂದವರಿದ್ದರೂ ಬೇರೆ ಬೇರೆ ಸಂಸ್ಕ್ರತಿ ಸಂಪ್ರದಾಯವಿದ್ದರೂ ನಾವೆಲ್ಲರೂ ಒಂದೇ ತಾಯಿಯ ಮಕ್ಕಳೆಂದು ಇಲ್ಲಿ ಬದುಕುತ್ತಿದ್ದೆವೆ.

ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿಗೆ ಅಗಾಧವಾದ ಶ್ರೀಮಂತಿಕೆಯನ್ನು ಹೊಂದಿದೆ ಎನ್ನೊದಕ್ಕೇ ನಮ್ಮ ನಡುವೆ ಇರುವ ಹಬ್ಬ ಹರಿದಿನಗಳೇ ಸಾಕ್ಷಿಯಾಗಿವೆ. ಈ ಮಾತಿಗೆ ಸಧ್ಯ ಬಂದಿರುವ ದೀಪಾವಳಿ ಹಬ್ಬ ಕೂಡಾ ಒಂದು.ಸಾಮಾನ್ಯವಾಗಿ ಹಬ್ಬ ಹರಿದಿನಗಳೇಂದರೆ ನಮಗೆ ಅಗಾಧವಾದ ಸಂತೋಷ ಸಂಭ್ರಮ ಇವುಗಳ ನಡುವೆ ನಮ್ಮ ಹಬ್ಬ ಹರಿದಿನಗಳ ಆಚರಣೆಗೆ ಗತಕಾಲದ ಇತಿಹಾಸವನ್ನು ಹೊಂದಿದ್ದು ದೀಪಾವಳಿ ಹಬ್ಬದ ಇತಿಹಾಸ ನೋಡೊದಾದರೆ ಗತಕಾಲದ ಅಚ್ಚರಿಯ ವೈಭವದ ನಮ್ಮ ಸಂಸ್ಕ್ರತಿ ಅನಾವರಣವಾಗುತ್ತದೆ.

ದೀಪಾವಳಿ (ದೀಪಗಳ ಸಾಲು) ದೀಪಗಳಿಂದ ದೀಪಗಳನ್ನು ಹಚ್ಚುವ ಹಬ್ಬ. ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ಭಾರತದಲ್ಲಿ ಸಾಂಪ್ರದಾಯಿಕವಾಗಿ ಪಂಚಾಂಗ ಚಂದ್ರಮಾನವನ್ನು ಅವಲಂಬಿಸಿವೆ. ಅಂದರೆ ಆಶ್ವಯುಜ ಮಾಸ ಕೃಷ್ಣ ಪಕ್ಷದ ಚತುರ್ದಶಿ, ಅಮಾವಾಸ್ಯೆ ಹಾಗೂ ಕಾರ್ತಿಕ ಮಾಸ ಶುಕ್ಲ ಪಕ್ಷದ ಪಾಡ್ಯ – ಈ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತಿದೆ.

ಇನ್ನೂ ದೀಪಾವಳಿ ಹಬ್ಬದ ಇತಿಹಾಸವನ್ನು ನೋಡೊದಾದರೆ
ದೀಪಾವಳಿಯು ಭಾರತದ ವಿಶೇಷ ಹಬ್ಬವಾಗಿದ್ದು, ಸಾಮಾನ್ಯವಾಗಿ ಭಾರತಾದ್ಯಂತ ಈ ಹಬ್ಬವನ್ನು ಬಹಳ ಹರ್ಷೋಲ್ಲಾಸದಿಂದ ಆಚರಿಸುತ್ತಾರೆ. ಈ ದಿನದಂದು ಚಿಕ್ಕವರು ಮತ್ತು ದೊಡ್ಡವರು, ಬಡವರು ಮತ್ತು ಶ್ರೀಮಂತರು, ಗ್ರಾಮೀಣರು ಮತ್ತು ನಗರವಾಸಿಗಳ ಮುಖದಲ್ಲಿ ಖುಷಿ ಕಂಡು ಬರುತ್ತದೆ. ರಾತ್ರಿಯಂತೂ ದೀಪಗಳ ಅಲಂಕಾರವು ನೋಡುಗರ ಮನಸ್ಸನ್ನು ಸೂರೆಗೊಳ್ಳುತ್ತದೆ. ಈ ಹಬ್ಬದ ಪ್ರಾರಂಭ ಯಾವಾಗ ಆಯಿತು ? ಹೇಗೆ ಆಯಿತು ? ಇದರ ಬಗ್ಗೆ ಅನೇಕ ವದಂತಿಗಳು ಅಥವಾ ಪೌರಾಣಿಕ ಕಥೆಗಳು ಪ್ರಚಲಿತವಾಗಿವೆ. ಪ್ರಾಚೀನ ಕಾಲದಲ್ಲಿ ನರಕಾಸುರನೆಂಬ ರಾಕ್ಷಸನು ಇಡೀ ಸೃಷ್ಟಿಯಲ್ಲಿ ತನ್ನ ಅಧಿಪತ್ಯವನ್ನು ಸ್ಥಾಪಿಸಿಕೊಂಡಿದ್ದನು. ಭಗವಂತನು ನರಕಾಸುರನನ್ನು ಕೊಂದು ಸೃಷ್ಟಿಯನ್ನು ಅವನ ಭಯದಿಂದ ಮುಕ್ತಗೊಳಿಸಿ ದೇವತೆಗಳನ್ನು ನರಕಾಸುರನ ಬಂಧನದಿಂದ ಬಿಡಿಸಿದನು ಎಂಬ ಮಾತಿದೆ.


ಇನ್ನೂ ಕತ್ತಲೆಯನ್ನು ಹೋಗಲಾಡಿಸಿ ಮನೆ ಹಾಗೂ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ಹಬ್ಬವೇ ದೀಪಾವಳಿ. ಮುಂಗಾರು ಬೆಳೆ ಕೊಯ್ಲಿಗೆ ಬರುವ ಸಮಯದಲ್ಲಿ ಈ ಹಬ್ಬ ಬರುವುದು ವಿಶೇಷ. ಕೆಲ ಕಡೆ ಆಶ್ವಯುಜ ಮಾಸದ ಕೊನೆಯ ಎರಡು ದಿನಗಳು ಹಾಗೂ ಕಾರ್ತಿಕ ಮಾಸದ ಮೊದಲನೆಯ ದಿನ ಈ ಹಬ್ಬವನ್ನು ಆಚರಿಸಿದರೆ ಇನ್ನು ಕೆಲ ಕಡೆ ಮುಂದಿನ ಎರಡು ದಿನಗಳನ್ನು ಸೇರಿಸಿ 5 ದಿನ ವಿಜೃಂಭಣೆಯಿಂದ ಈ ಹಬ್ಬವನ್ನು ಆಚರಿಸಲಾಗುತ್ತದೆ.


ದೀಪಾವಳಿ ಹಬ್ಬದ ಮಹತ್ವ:
ದೀಪಾವಳಿ ‘ದೀಪಾ’ ಎಂದರೆ ಮಣ್ಣಿನ ದೀಪ ಹಾಗೂ ‘ವಲಿ’ ಎಂದು ಯಾವುದಾದರು ವಸ್ತು ಸರಣಿಯಾಗಿಯಿಡುವುದು. ದೀಪಾವಳಿಯ ಅಮವಾಸ್ಯೆಯನ್ನು ದೀವಾಳಿ ಅಮಾವಾಸ್ಯೆಯೆಂದು ಕರೆಯುತ್ತಾರೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಆ ದಿನ ಕತ್ತಲೆಯಿಂದ ಕೂಡಿರುತ್ತದೆ. ದೀಪಾವಳಿ ಹಬ್ಬವನ್ನು ಹಿಂದೂಗಳ ಹಬ್ಬ ಮಾತ್ರ ಆಗಿರದೇ ಈ ಹಬ್ಬವನ್ನು ಜೈನ್ ಸಿಖ್ ಹಾಗೂ ಬೌದ್ಧ ಧರ್ಮದ ಬಂಧುಗಳು ಕೂಡ ಈ ಹಬ್ಬವನ್ನು ಆಚರಿಸುತ್ತಾರೆ.
ಹಿಂದೂ ಕ್ಯಾಲೆಂಡರ್ ಪ್ರಕಾರ ಈ ಹಬ್ಬ ಕಾರ್ತಿಕ ಮಾಸದಲ್ಲಿ ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ಕೆಲವರು ಮನೆಗೆ ಹೊಸ ವಸ್ತುಗಳನ್ನು ತರುತ್ತಾರೆ.ಭಾರತದ ಬೇರೆ ಬೇರೆ ಪ್ರದೇಶಗಳಲ್ಲಿ ದೀಪಾವಳಿಗೆ ಅದರದ್ದೇ ಆದ ಮಹತ್ವವಿದೆ ಹಾಗೂ ಅವರದ್ದೆ ಆದ ಕೆಲವು ಸಂಪ್ರದಾಯಗಳು ಇರುತ್ತದೆ. ಕೆಲವರು ತಮ್ಮ ಸಂಪ್ರದಾಯಕ್ಕೆ ತಕ್ಕಂತೆ ತಮ್ಮ ಹಬ್ಬವನ್ನು ಆಚರಿಸುತ್ತಾರೆ. ಆದರೆ ಎಲ್ಲರ ಪ್ರಕಾರ ದೀಪಾವಳಿ ಹಬ್ಬ ರಾಮಾಯಣದ ಕಥೆಗೆ ಹೊಂದಿಕೊಂಡಿದೆ.ರಾವಣನನ್ನು ಸಂಹಾರ ಮಾಡಿ ರಾಮ, ಸೀತಾ, ಲಕ್ಷ್ಮಣ ಹಾಗೂ ಹನುಮಂತ ಲಂಕೆಯಿಂದ ಆಯೋಧ್ಯೆಗೆ ಹಿಂದಿರುಗಿದ ದಿನ. ಅಲ್ಲದೇ ರಾಮ ಪಟ್ಟಾಭಿಷೇಕಗೊಂಡ ದಿನ. ಹಾಗಾಗಿ ಜನರು ಆ ದಿನ ಆನಂದದಿಂದ ದೀಪಗಳನ್ನು ಬೆಳಗಿಸಿ ರಾಮನನ್ನು ಸ್ವಾಗತಿಸಿದ್ದರು. ಅಲ್ಲದೇ ಪಾಂಡವರು ಕೂಡ ಅದೇ ದಿನ ತಮ್ಮ ಅಜ್ಞಾತವಾಸವನ್ನು ಮುಗಿಸಿದ ದಿನ ಎನ್ನುವ ಕಥೆಯು ಇದೆ ಇದರಿಂದ ಈ ಒಂದು ಹಬ್ಬವನ್ನು ಇಷ್ಟೊಂದು ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ.


ದೀಪಾವಳಿಯ ಐದು ಹಬ್ಬಗಳು ಹಾಗೂ ಅದರ ಮಹತ್ವಗಳು
ಹಬ್ಬದ ಮೊದಲೇಯ ದಿನ ಜನರು ತಮ್ಮ ಮನೆಗೆ ಅಡುಗೆ ಪಾತ್ರೆಗಳು, ಚಿನ್ನದ ನಾಣ್ಯ ಹಾಗೂ ಆಭರಣಗಳನ್ನು ಖರೀದಿಸಲು ಹೋಗುತ್ತಾರೆ. ಅಲ್ಲದೇ ತಮ್ಮ ಮನೆ ಹಾಗೂ ಕಚೇರಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಮಣ್ಣಿನ ದೀಪವನ್ನು ಹಚ್ಚಿ ಅಲಂಕರಿಸುತ್ತಾರೆ
ನರಕ ಚತುರ್ದಶಿ- ನರಕ ಚತುರ್ದಶಿಯನ್ನು ಚೋಟಾ ದೀಪಾವಳಿ ಎಂದು ಕರೆಯುತ್ತಾರೆ ದೀಪಾವಳಿಯ ಮೂರನೇಯ ದಿನ ಈ ಹಬ್ಬವನ್ನು ಆಚರಿಸುತ್ತಾರೆ. ಶ್ರೀಕೃಷ್ಣನು ನರಕಾಸುರನನ್ನು ಕೊಂದ ನೆನಪನ್ನು ಈ ಹಬ್ಬ ತರುತ್ತದೆ. ನರಕಾಸುರನನ್ನು ಆಶ್ವಯುಜ ಕೃಷ್ಣ ಚತುರ್ದಶಿಯ ಕತ್ತಲೆಯಲ್ಲಿ ಕೃಷ್ಣ ಸಂಹಾರ ಮಾಡುತ್ತಾನೆ. ಈ ಹಬ್ಬದಂದು ಸಿಹಿ ತಿನಿಸುಗಳನ್ನು ಖರೀದಿಸಿ ಕುಟುಂಬದವರಿಗೆ, ಸ್ನೇಹಿತರಿಗೆ ಹಾಗೂ ಸಂಬಂಧಿಕರಿಗೆ ಹಂಚುತ್ತಾರೆ. ಸಿಹಿ ತಯಾರಿಸುವವರು ನರಕ ಚತುರ್ದಶಿದಂದು ಹೆಚ್ಚು ಸಮಯ ಕೆಲಸ ಮಾಡುತ್ತಾರೆ.
ಲಕ್ಸ್ಮೀ ಪೂಜೆ – ದೀಪಾವಳಿಯಂದು ಲಕ್ಷ್ಮಿ ಪೂಜೆ ಮಾಡುತ್ತಾರೆ. ಲಕ್ಷ್ಮೀ ಎಂದರೆ ಕೇವಲ ಧನಾಧಿದೇವತೆ ಎಂಬ ಪ್ರತೀತಿಯಿದೆ. ಲಕ್ಷ್ಮೀ ಕೇವಲ ಧನಲಕ್ಷ್ಮೀ ಮಾತ್ರವಲ್ಲ. ಸಕಲ ಶ್ರೇಯಸ್ಸುಗಳಿಗೆ ಲಕ್ಷ್ಮೀ ಕಾರಣ ಎಂದು ಹೇಳುತ್ತಾರೆ. ಈ ಹಬ್ಬದಂದು ಎಲ್ಲರೂ ತಮ್ಮ ಕುಟುಂಬದವರೊಂದಿಗೆ ಸೇರಿ ಒಬ್ಬರಿಗೊಬ್ಬರು ಸಿಹಿ ಹಂಚಿ ಉಡುಗೊರೆ ನೀಡುತ್ತಾರೆ.
ಗೋಪೂಜೆ -ದೀಪಾವಳಿಯ ನಾಲ್ಕನೇ ದಿನ ಗೋ ಪೂಜೆ ಮಾಡುತ್ತಾರೆ. ಈ ದಿನದಂದು ಗೋವುಗಳನ್ನು ಅಲಂಕರಿಸಿ, ಹಾಲು ಹಿಡಿಯುವ ಪಾತ್ರೆ, ಕುಡಗೋಲುಗಳನ್ನು ಪೂಜಿಸಿ, ಗೋಶಾಲೆಯನ್ನು ದೀಪದಿಂದ ಬೆಳಗಿ, ಹಸುಗಳಿಗೆ ಅಕ್ಕಿ, ಬೆಲ್ಲ, ತಿಂಡಿ ತಿನಿಸುಗಳನ್ನು ನೀಡುತ್ತಾರೆ.ಇದನ್ನು ಹೆಚ್ಚಾಗಿ ಗೌಳಿ ಜನಾಂಗದ ಬಂಧುಗಳು ಆಚರಣೆ ಮಾಡುತ್ತಾರೆ. ಉತ್ತರ ಭಾರತದಲ್ಲಿ ಅಥವಾ ಕೆಲವರ ಸಂಪ್ರದಾಯದಲ್ಲಿ ಈ ದಿನದಂದು ಪತಿ ತಮ್ಮ ಪತ್ನಿಯರಿಗೆ ಉಡುಗೊರೆ ನೀಡುತ್ತಾರೆ. ಅಲ್ಲದೇ ಹೊಸದಾಗಿ ಮದುವೆಯಾದ ಜೋಡಿಯನ್ನು ಮನೆಗೆ ಔತಣಕ್ಕೆ ಕರೆದು ಉಡುಗೊರೆ ನೀಡಲಾಗುತ್ತದೆ.

ಆರತಿ ಹಬ್ಬ ದೀಪಾವಳಿಯ ಐದನೇ ದಿನದಂದು ಅಣ್ಣ-ತಂಗಿಯರ ಹಬ್ಬವಾಗಿದ್ದು, ಅಣ್ಣಂದಿರು ತಮ್ಮ ತಂಗಿಯ ಮನೆಗೆ ಊಟಕ್ಕೆ ಹೋಗುತ್ತಾರೆ. ಅಲ್ಲದೇ ತಿಲಕ ಶಾಸ್ತ್ರ ಮಾಡುತ್ತಾರೆ. ಸಹೋದರಿಯರು ತಮ್ಮ ಸಹೋದರನಿಗೆ ತಿಲಕ ಶಾಸ್ತ್ರ ಮಾಡುತ್ತಾರೆ. ಇದನ್ನು ಮತ್ತೊಂದು ರಕ್ಷಾ ಬಂಧನ ಎಂದೂ ಕರೆಯಲಾಗುತ್ತದೆ.ಹೀಗೆ ಬೆಳಕಿನ ಹಬ್ಬ ದೀಪಾವಳಿ ಹಬವು ಗತಕಾಲದ ಆಚರಣೆಯ ವೈಭವವನ್ನು ಹೊಂದಿದ್ದು ನಿಜಕ್ಕೂ ಹಬ್ಬಗಳು ಆಚರಿಸಲು ಅಷ್ಟೇ ಅಲ್ಲದೆ ಒಂದೊಂದು ಇತಿಹಾಸ ಅದರ ಹಿಂದೆ ಇರೊದು ನಿಜವಾಗಿಯೂ ಅದ್ಭುತ.ಇದರ ನಡುವೆ ಈಬಾರಿ ಕರೋನ ಮಹಾಮಾರಿ ಇಡೀ ಮನುಕುಲಕ್ಕೆ ಆಘಾತ ಮಾಡಿದ್ದು ಆದರೂ ನಮ್ಮ ಜನರು ಬೆಳಕಿನ ಹಬ್ಬ ದೀಪಾವಳಿಯನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಿದ್ದು ದೇವರು ಒಳ್ಳೆಯದನ್ನು ಮಾಡಲಿ ಎಂಬುದು ಸುದ್ದಿ ಸಂತೆ ವೆಬ್ ನ್ಯೂಸ್ ನ ಆಶಯ.


Google News

 

 

WhatsApp Group Join Now
Telegram Group Join Now
Suddi Sante Desk