ಹುಬ್ಬಳ್ಳಿ –
ರಾಜ್ಯದಲ್ಲಿ ಕೊರೊನಾ ವೈರಸ್ ನಿಂದ ಮೃತರಾದ ಹಾಗೇ ಅದರ ಒಂದು ನಿಯಂತ್ರಣಕ್ಕೆ ಕೈ ಜೋಡಿಸಿ ದ ರಾಜ್ಯದಲ್ಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಶಿಕ್ಷಕರು ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ ಹಿನ್ನೆಲೆ ಯಲ್ಲಿ ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಕೂಡಲೇ ಐವತ್ತು ಲಕ್ಷ ರೂ. ಪರಿಹಾರ ವನ್ನು ಮೃತರ ಕುಟುಂಬಕ್ಕೆ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಶೋಕ ಸಜ್ಜನ ಒತ್ತಾಯಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಈಗಾಗಲೇ ರಾಜ್ಯದಲ್ಲಿ ಅರವತ್ತಕ್ಕೂ ಹೆಚ್ಚು ಜನ ಶಿಕ್ಷಕರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರು ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದರು
ರಾಜ್ಯದಲ್ಲಿ ಮೃತರಾದ ಶಿಕ್ಷಕರ ಕುಟುಂಬ ನಿಜಕ್ಕೂ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದು ಈ ಕೂಡಲೇ ಸರ್ಕಾರ ಸೂಕ್ತ ನಿರ್ಧಾರವನ್ನು ಕೈಗೊಂಡು ಮೃತರ ಕುಟುಂಬಕ್ಕೆ ನೆರವಾಗಬೇಕಿದೆ ಎಂದು ಅವರು ಮನವಿ ಮಾಡಿದರು.ಇವರೊಂದಿಗೆ ಸಂಘದ ಸರ್ವ ಸದಸ್ಯರಾದ ಎಲ್ ಐ ಲಕ್ಕಮ್ಮನವರ, ಶರಣಬಸವ ಬನ್ನಿಗೋಳ, ಉಪ್ಪಿನ, ಸೇರಿದಂತೆ ಹಲವರು ಉಪಸ್ಥಿತರಿದ್ದರು