ASI ಸಾವು – ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪೊಲೀಸ್ ಅಧಿಕಾರಿ

Suddi Sante Desk

ಮಂಗಳೂರು –

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ASI ಪೊಲೀಸ್ ಅಧಿಕಾರಿಯೊಬ್ಬರು ಚಿಕಿತ್ಸೆ ಫಲಿಸದೇ ಸಾವಿಗೀಡಾದ ಘಟನೆ ಮಂಗಳೂರಿನಲ್ಲಿ ನಡೆದಿದೆ‌.ಪಾಂಡೇಶ್ವರ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯ ಎಎಸ್‌ಐ ನಾರಾಯಣ ನಾಯ್ಕ್ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮೃತಪಟ್ಟಿದ್ದಾರೆ.

ಹೈವೇ ಪೆಟ್ರೋಲಿಂಗ್ ವೇಳೆ ಮೇರಿಹಿಲ್ ಬಳಿ ರಸ್ತೆ ಅಪಘಾತಕ್ಕೆ ಒಳಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆಯಲ್ಲಿದ್ದ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಬಂಟ್ವಾಳದ ಕೇಪು ನೀರ್ಕಜೆಯ ಈಶ್ವರ ನಾಯ್ಕ ಮತ್ತು ದೇವಕಿ ದಂಪತಿಯ ಪುತ್ರನಾಗಿ ಜನಿಸಿದ ಇವರು 1989ರಲ್ಲಿ ಪೊಲೀಸ್ ಇಲಾಖೆಗೆ ಸಿಬ್ಬಂದಿ ಯಾಗಿ ಸೇರ್ಪಡೆಯಾದರು. ಚೆನ್ನಪಟ್ಟಣ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದು ಪಣಂಬೂರು, ಬಜಪೆ, ಮಂಗಳೂರು ಉತ್ತರ ಮಂಗಳೂರು ದಕ್ಷಿಣ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿ ಸಿದ್ದರು.ಮಂಗಳೂರಿನ ಸಿಎಆರ್ ಮೈದಾನ ದಲ್ಲಿ ಮೃತರ ಪಾರ್ಥಿವ ಶರೀರಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಅಂತಿಮ ನಮನ ಸಲ್ಲಿಸಿದ್ದು, ಬಳಿಕ ಸರಕಾರಿ ಗೌರವ ದೊಂದಿಗೆ ಅಂತ್ಯಕ್ರಿಯೆ ನಡೆಸ ಲಾಯಿತು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.