ಬೆಂಗಳೂರು –
ವಿಧಾನಭೆಯ ಉಪ ಸಭಾಪತಿ ಬೆಳಗಾವ ಜಿಲ್ಲೆಯ ಸವದತ್ತಿ ವಿಧಾನ ಸಭಾ ಕ್ಷೇತ್ರದ ಶಾಸಕ ಆನಂದ್ ಮಾಮನಿ ನಿಧನರಾಗಿದ್ದಾರೆ.ಕಳೆದ ಕೆಲ ದಿನಗಳಿಂದ ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ಇವರು ನಿನ್ನೆ ತಡರಾತ್ರಿ ಬೆಂಗಳೂರಿನ ಮಣಿ ಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನ ರಾಗಿದ್ದಾರೆ.
ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಮಾಮನಿ ಅವರನ್ನು ಕಳೆದ ಕೆಲ ದಿನಗಳಿಂದ ಚನೈ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಿ ನಂತರ ಗುಣಮುಖರಾದ ಹಿನ್ನಲೆಯಲ್ಲಿ ಇವರನ್ನು ಬೆಂಗಳೂರಿಗೆ ಕರೆದು ಕೊಂಡು ಬಂದು ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿ ದ್ದಾರೆ.
ಆನಂದ ಮಾಮನಿ ಅವರು ಈ ಮೊದಲು ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಬಳಿಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆನಂದ್ ಮಾಮನಿ ಅವರ ಪಾರ್ಥಿವ ಶರೀರವನ್ನು ಈಗಾಗಲೇ ಬೆಂಗಳೂರಿ ನಿಂದ ಬೆಳಗಾವಿ ಜಿಲ್ಲೆಯ ಸವದತ್ತಿಗೆಆಂಬುಲೆನ್ಸ್ ಮೂಲಕ ರವಾನೆ ಮಾಡಲಾಗುತ್ತಿದೆ ಸವದತ್ತಿ ಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ನಂತರ ಮಧ್ಯಾಹ್ನ 3 ಗಂಟೆಗೆ ಸವದತ್ತಿಯ ಅವರ ಚಂದ್ರಮಾ ಫಾರ್ಮ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಇನ್ನೂ ವಿಧಾನ ಸಭಾ ಉಪ ಸಭಾಪತಿ ಮತ್ತು ಶಾಸಕರಾಗಿದ್ದ ಆನಂದ್ ಮಾಮನಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಶಾಸಕರಾದ ಅಮೃತ ದೇಸಾಯಿ,ಅರವಿಂದ ಬೆಲ್ಲದ,ಮಾಜಿ ಸಚಿವರಾದ ಸಂತೋಷ್ ಲಾಡ್,ವಿನಯ ಕುಲಕರ್ಣಿ, ವಿರೇಶ ಬ್ಯಾಹಟ್ಟಿ ಸೇರಿದಂತೆ ಹಲವು ನಾಯಕರು ಸಂತಾಪವನ್ನು ಸೂಚಿಸಿದ್ದಾರೆ.
ಸಿಎಂ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆ ಯಲ್ಲಿ ಈ ಕುರಿತಂತೆ ನಮ್ಮ ಪಕ್ಷದ ಶಾಸಕರು, ರಾಜ್ಯ ವಿಧಾನಸಭೆಯ ಮಾನ್ಯ ಉಪ ಸಭಾಧ್ಯಕ್ಷ ರಾದ ಆತ್ಮೀಯ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಅಂತ ಸಂತಾಪ ಸೂಚಿಸಿದ್ದಾರೆ.
ಇನ್ನೂ ಇದಕ್ಕೂ ಮುನ್ನ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲಿ ಇವರು ನಿಧನರಾಗಿದ್ದಾರೆ ಎಂಬ ಸುದ್ದಿ ಹರಡಿತ್ತು ಈ ಕುರಿತಂತೆ ವಿಡಿಯೋವೊಂದನ್ನು ಮಾಡಿ ಹೇಳಿಕೆ ಬಿಡುಗಡೆ ಮಾಡಿದ್ದ ಇವರು ಮನುಷ್ಯನಿಗೆ ಜೀವನದಲ್ಲಿ ಸ್ವಾಭಾವಿಕವಾಗಿ ಆರೋಗ್ಯದಲ್ಲಿ ಏರಿಳಿತ ಸಹಜ ಕೆಲವು ವರ್ಷಗಳಿಂದ ನನಗೆ ಮಧುಮೇಹ ಖಾಯಿಲೆ ಇದೆ ಅದರ ಜೊತೆಗೆ ಬೇರೆ ಬೇರೆ ಕಾರಣ ಹೇಳಿ ಸುಳ್ಳು ವದಂತಿ ಕೆಲ ಮಾಧ್ಯಮಗಳಲ್ಲಿ ಬರ್ತಿದೆ ಮನೆ ದೇವರಾದ ಜಾಲಿಕಟ್ಟಿ ಬಸವಣ್ಣ ತಂದೆ-ತಾಯಿ, ರಾಜ್ಯದ ಜನರ ಆಶೀರ್ವಾದ ಇದೆ ಸುಳ್ಳು ವಂದತಿಗೆ ನಮ್ಮ ಕಾರ್ಯಕರ್ತರು ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದರು.
ನನ್ನ ಕುಟುಂಬ ಸದಸ್ಯರು ನನ್ನ ಬೆನ್ನಿಗೆ ನಿಂತಿ ದ್ದಾರೆ ನಿಮ್ಮೆಲ್ಲರ ಆಶೀರ್ವಾದ ಮಾಧ್ಯಮ ಸ್ನೇಹಿತರ ಸಹಕಾರ ಇದೆ ಸಿಎಂ ಬಸವರಾಜ ಬೊಮ್ಮಾಯಿ ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದ್ದು ಯಾವುದೇ ಕಾರಣಕ್ಕೂ ಧೈರ್ಯ ಗೆಡುವ ಪ್ರಶ್ನೆಯೇ ಇಲ್ಲ ನಾವೆಲ್ಲರೂ ನಿಮ್ಮ ಬೆನ್ನಿಗಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಅಲ್ಲದೇ ಬಿಎಸ್‌ವೈ ಸೇರಿದಂತೆ ಅನೇಕ ಶಾಸಕರು ನನಗೆ ಸಲಹೆ ಕೊಟ್ಟಿದ್ದಾರೆ ಆ ನಿಟ್ಟಿನಲ್ಲಿ ನಾನು ಧೈರ್ಯವಾಗಿ ಬಂದು ತಮ್ಮೆಲ್ಲರ ಸೇವೆಗೆ ಮತ್ತೆ ಅಣಿಯಾಗುತ್ತೇ ನೆಂದು ಆತ್ಮವಿಶ್ವಾಸ ನೀಡುತೇನೆ ಅಂತ ಹೇಳಿದ್ದರು ಇಷ್ಟೇಲ್ಲಾ ಹೇಳಿದ ಬಿಜೆಪಿ ಪಕ್ಷದ ಶಾಸಕ ನಿಗೆ ಮತ್ತೆ ಆರೋಗ್ಯ ಕೈ ಕೊಟ್ಟಿದ್ದು ಚಿಕಿತ್ಸೆ ಫಲಿಸದೇ ಮೃತರಾಗಿದ್ದಾರೆ
ದುರಾದೃಷ್ಟವಷಾತ್ ಅವರು ಇಂದು ಇಹಲೋಕ ತ್ಯಜಿಸಿದ್ದು ಕ್ಷೇತ್ರದಲ್ಲಿ ಸಾಕಷ್ಟು ಜನಪರ ಸಮಾಜ ಪರ ಅಭಿವೃದ್ದಿ ಕೆಲಸ ಕಾರ್ಯಗಳನ್ನು ಮಾಡಿ ಅಭಿವೃದ್ದಿ ಹರಿಕಾರ ಎಂದು ಕರೆಯಿಸಿಕೊಂಡಿದ್ದ ಆನಂದ ಮಾಮಾನಿ ಅವರು ಇನ್ನೂ ಕ್ಷೇತ್ರದಲ್ಲಿ ಕೇಸರಿ ಪಕ್ಷದಲ್ಲಿ ನೆನಪಾಗಿ ಉಳಿದು ಹೋಗಿದ್ದಾರೆ ಯುವ ಉತ್ಸಾಹಿ ಶಾಸಕರಾಗಿದ್ದ ಇವರಿಂದ ಕ್ಷೇತ್ರಕ್ಕೆ ಪಕ್ಷಕ್ಕೆ ಸಾಕಷ್ಟು ಅಭಿವೃದ್ದಿ ಕೆಲಸ ಕಾರ್ಯ ಗಳಾಗಿದ್ದನ್ನು ನೆನಪಿಸಿಕೊಳ್ಳಬಹುದು.