ಬೆಂಗಳೂರು –
ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದಲೇ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
12 ನಿದ್ದೆ ಮಾತ್ರೆಗಳನ್ನು ತಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂಬ ಪ್ರಮುಖವಾದ ಉದ್ದೇಶದಿಂದಲೇ ಹೀಗೆ ಮಾಡಿದ್ದಾರೆಂದು ಸದಾಶಿವ ನಗರ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಇನ್ನೂ 5 mg ಯ Alprazolam 12 ಮಾತ್ರೆಗಳನ್ನು ತಗೆದುಕೊಂಡಿದ್ದಾರೆ.
ಇನ್ನೂ ಸಧ್ಯ ಎನ್ ಆರ್ ಸಂತೋಷ ಎಮ್ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.ಇನ್ನೂ ಆತ್ಮಹತ್ಯೆಗೆ ಯತ್ನಿಸಿದ ಸಂತೋಷ ಮೇಲೆ ಈಗಾಗಲೇ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ IPC 309 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ನಾಡದೋರೆ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್ ಆತ್ಮಹತ್ಯೆ ಯತ್ನ ಕೇಸ್ ಕುರಿತಂತೆ ಎಂ ಎಸ್ ರಾಮಯ್ಯ ಆಸ್ಪತ್ರೆಯಿಂದ ಎಂಎಲ್ ಸಿ ರಿಪೋರ್ಟ್ ಸಿಕ್ಕಿದೆ. ಇದನ್ನು ಆದರಿಸಿರುವ ಸದಾಶಿವನಗರ ಪೊಲೀಸರು ಇವರ ಮೇಲೆ ಪ್ರಕರಣವನ್ನು ದಾಖಲು ಮಾಡಿದ್ದಾರೆ.
ಆಸ್ಪತ್ರೆಯಿಂದ ರಿಪೋರ್ಟ್ ಸಿಗುತ್ತಿದ್ದಂತೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತೋಷ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ದಾಖಲಾಗಿದ್ದು ಇತ್ತ ಐಸಿಯುನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಸ್ಪತ್ರೆಯ ಎಂಎಲ್ ಸಿ ರಿಪೋರ್ಟ್ ಆಧಾರದ ಮೇಲೆ ಎನ್ ಆರ್ ಸಂತೋಷ್ ಗುಣಮುಖನಾದ ಬಳಿಕ ಕ್ರಮವನ್ನು ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.
ಇನ್ನೂ ಆತ್ಮಹತ್ಯೆಗೆ ಯತ್ನಿಸಿದ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದ್ದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಕೇಸ್ ದಾಖಲಾಗಿದೆ. IPC 309 ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಿರುವ ಪೊಲೀಸರು ಸಂತೋಷ್ ರನ್ನೇ ಎಫ್ ಐಆರ್ ನಲ್ಲಿ ಆರೋಪಿಯನ್ನಾಗಿ ಮಾಡಿದ್ದಾರೆ.ಒಟ್ಟಾರೆ ಆತ್ಮಹತ್ಯೆಗೆ ಯತ್ನ ವಿಚಾರ ಈಗ ಬೇರೆ ಬೇರೆ ತಿರುವು ಪಡೆದುಕೊಳ್ಳುತ್ತಿದ್ದು ಏನೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.