ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ – ರಾಜ್ಯ ಸರ್ಕಾರದಿಂದ ಹೊರಬಿತ್ತು ಆದೇಶ…..

Suddi Sante Desk
ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ – ರಾಜ್ಯ ಸರ್ಕಾರದಿಂದ ಹೊರಬಿತ್ತು ಆದೇಶ…..

ಬೆಂಗಳೂರು

ರಾಜ್ಯದ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ಯನ್ನು ನಿಷೇಧ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಮಾಡಿದೆ ಹೌದು ದೇವಾಲಯದಲ್ಲಿ ಮೊಬೈಲ್ ಬಳಕೆ ಮಾಡುವವ ರಿಗೆ,ಮೊಬೈಲ್ ಮೂಲಕ ರೀಲ್ಸ್ ಮಾಡುವವರಿಗೆ ಈ ಮೂಲಕ ಶಾಕ್ ನೀಡಲಾಗಿದೆ

ಕರ್ನಾಟಕ ಸರ್ಕಾರ ಇಂತಹ ದೊಂದು ಕಹಿಸುದ್ದಿ ನೀಡಿದೆ.ದೇವಾಲಯಗಳಲ್ಲಿ ಮೊಬೈಲ್ ಬಳಕೆಗೆ ನಿಷೇಧ ಹೇರಲಾಗಿದೆ.ಈ ಕುರಿತು ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಆದೇಶ ಹೊರಡಿಸಿದೆ.ಇಲಾಖೆ ವ್ಯಾಪ್ತಿಯ ದೇವಾಲಯಗಳ ಆವರಣದಲ್ಲಿ ಮೊಬೈಲ್ ಬಳಕೆ ಮಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವ್ಯಾಪ್ತಿಯಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ ದೇವಾಲಯಗಳಿವೆ. ದೇವಾ ಲಯಗಳನ್ನು ಆದಾಯಕ್ಕೆ ಅನುಗುಣವಾಗಿ ಎ, ಬಿ ಮತ್ತು ಸಿ ಎಂದು ವಿಂಗಡಣೆ ಮಾಡಲಾಗಿದೆ.

ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ಸಂಸ್ಥೆಗಳ ನಿರ್ವಹಣೆಯನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಹಾಗೂ ನಿಯಮಗಳು 2002 ರ ಅನ್ವಯ ನಿರ್ವಹಿಸಲಾಗುತ್ತಿದೆ.

ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಬಳಕೆ ಮಾಡಬೇಡಿ ಎಂದು ಈಗಾಗಲೇ ಫಲಕ ಹಾಕ ಲಾಗಿದೆ. ಆದರೂ ಜನರು ಮೊಬೈಲ್ ಬಳಕೆ ಮಾಡುತ್ತಾರೆ. ಅದು ರಿಂಗ್ ಆಗಿ ಗದ್ದಲಕ್ಕೆ ಕಾರಣವಾಗುತ್ತದೆ.ಆದ್ದರಿಂದ ಮೊಬೈಲ್ ಬಳಕೆಗೆ ನಿಷೇಧ ಹೇರಿ ಮತ್ತೊಂದು ಪರಿಷ್ಕೃತ ಆದೇಶ ವನ್ನು ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.