ಮಾನವೀಯತೆ ಮೆರೆದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ…..

Suddi Sante Desk

ಚಿತ್ರದುರ್ಗ

ಗಾಯಾಳುಗಳಿಗೆ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಮಾನ ವೀಯತೆ ಮೆರೆದ ವಿಧಾನ ಪರಿಷತ್ ಸಭಾಪತಿ ಮಾನ್ಯಶ್ರೀ ಬಸವರಾಜ ಹೊರಟ್ಟಿ

ಕಾರು ಹಾಗೂ ದ್ವಿಚಕ್ರ ವಾಹನಗಳ ಮಧ್ಯೆ ಇಂದು ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಿರಿಗೆರೆ ಬಳಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ವಾಗಿ ಗಾಯಗೊಂಡಿರುವ ಒರ್ವ ಬಾಲಕ ಸೇರಿದಂ ತೆ ದಂಪತಿಯನ್ನು ಕೂಡಲೇ ಅಸ್ಪತ್ರೆಗೆ ಸಾಗಿಸಿ ಅವರ ಜೀವ ಉಳಿಸುವಲ್ಲಿ ನೆರವಾಗಿದ್ದಾರೆ ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಇದರೊಂದಿಗೆ ಮಾನವೀಯತೆ ಮೆರೆದಿ ದ್ದಾರೆ ಅವರು

ಕಚೇರಿ ಕಾರ್ಯ ಕಲಾಪ ಮುಗಿಸಿ ಹುಬ್ಬಳ್ಳಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು ಬೆಳಿಗ್ಗೆ ಬೆಂಗಳೂರಿನಿಂದ ತೆರಳುತ್ತಿದ್ದ ಸಭಾಪತಿ ಬಸವರಾಜ ಹೊರಟ್ಟಿಯವರು ಮಾರ್ಗ ಮಧ್ಯದಲ್ಲಿ ಸಿರೆಗೆರೆ ಬಳಿ ತಮ್ಮ ಕಣ್ಣೆದುರಿಗೆ ಸಂಭವಿ ಸಿದ ಅಪಘಾತ ಗಮನಿಸಿ ಕೂಡಲೇ ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳಿಗೆ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲು ಸಹಕರಿಸಿದರು.

ಅಲ್ಲದೇ ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಬೇಗನೆ ಸ್ಥಳಕ್ಕೆ ಆಗಮಿಸುವಂತೆ ಸೂಚಿಸಿದರು ಹಾಗೂ ತುರ್ತು ಚಿಕಿತ್ಸಾ ವಾಹನಕ್ಕೆ ಕರೆಮಾಡಿ ಮೂವರು ಗಾಯಾಳುಗಳನ್ನು ಶೀಘ್ರದಲ್ಲಿಯೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸು ವಲ್ಲಿ ನೆರವಾದರು.ಸುಮಾರು ಅರ್ಧ ಗಂಟೆಗಿಂತ ಲೂ ಹೆಚ್ಚು ಕಾಲ ಅಪಘಾತ ಸ್ಥಳದಲ್ಲಿಯೇ ಇದ್ದು ಗಾಯಾಳುಗಳಿಗೆ ಧೈರ್ಯ ಹೇಳಿ ಅವರಿಗೆ ತುರ್ತು ಚಿಕಿತ್ಸೆ ದೊರಕಿಸುವಲ್ಲಿ ಶ್ರಮಿಸಿದರು.ಸಭಾಪತಿ ಬಸವರಾಜ ಹೊರಟ್ಟಿಯವರು ಸಂವಿಧಾನಿಕ ದೊಡ್ಡ ಹುದ್ದೆಯಲ್ಲಿದ್ದರೂ ಜನಸಾಮಾನ್ಯರ ಕಷ್ಟಗಳಿಗೆ ಕೂಡಲೇ ಪ್ರತಿಸ್ಪಂದಿಸಿ ನೆರವಾಗುವ ಮಾನವೀಯ ಗುಣ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿ ದ್ದು ಇಂದಿನ ಯುವ ರಾಜಕಾರಣಿಗಳಿಗೆ ಮಾದರಿ ಯಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.