ಶಿಕ್ಷಕರ ಸಮಸ್ಯೆ ಪರಿಹಾರಕ್ಕಾಗಿ ಜುಲೈ 15 ರ ಗಡುವು ನೀಡಿದ ಬಸವರಾಜ ಹೊರಟ್ಟಿ – ಸರ್ಕಾರಿ ಶಾಲೆಗಳ ಶಿಕ್ಷಕರ ಪರ ಧ್ವನಿ ಎತ್ತದ ಬಸವರಾಜ ಹೊರಟ್ಟಿ…..

ಹುಬ್ಬಳ್ಳಿ –

ರಾಜ್ಯ ಸರ್ಕಾರ 1995-2000ದ ಅವಧಿಯಲ್ಲಿ ಆರಂಭ ಗೊಂಡ ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು ಕಾಲ್ಪನಿಕ ವೇತನ ಜಾರಿಗೊಳಿಸಬೇಕು ಹಾಗೂ ಅನುದಾನಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಹಿಂದಿನ ಪದ್ಧತಿಯನ್ನೇ ಅನುಸರಿಸಬೇಕು.ಈ ಬೇಡಿಕೆ ಗಳನ್ನು ಜುಲೈ 15ರೊಳಗೆ ಈಡೇರಿಸಬೇಕು.ಇಲ್ಲದಿದ್ದರೆ ಶಿಕ್ಷಕರ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ನಡೆಸ ಲಾಗುವುದು ಎಂಬ ನಿರ್ಣಯವನ್ನು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಕೇಂದ್ರ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.ಸಂಘದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್ ನಿರ್ಣಯ ಮಂಡಿಸಿದರು.

ಸಭೆಯಲ್ಲಿ ಮಾತನಾಡಿದ ಹೊರಟ್ಟಿ ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದಾಗಿ ಹೇಳಿದ್ದ ಸರ್ಕಾರ ವಿಳಂಬ ಮಾಡುತ್ತಲೇ ಬಂದಿದೆ.ಈಗಲಾದರೂ ಬೇಡಿಕೆ ಈಡೇರಿಸಬೇಕು.ಅನುದಾನಿತ ಶಾಲೆಗಳ ಮಾನ್ಯತೆ ನವೀಕರಣದ ಹೆಸರಿನಲ್ಲಿ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ.ಹಾಗಾಗಿ ಹಳೇ ಪದ್ಧತಿ ಮುಂದುವರಿಸಬೇಕು. 2006ರಿಂದ ನೇಮಕವಾದ ಶಿಕ್ಷಕರಿಗೆ ಹಳೇ ಪಿಂಚಣಿ ಪದ್ಧತಿಯನ್ನೇ ಮುಂದುವರಿಸಬೇಕು.ಈ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರಿಗೆ ಒತ್ತಾಯಿಸಲಾಗುವುದು ಎಂದು ಹೇಳಿದರು.‌ಪಠ್ಯ ಪುಸ್ತಕ ಪೂರೈಕೆ ವಿಳಂಬವು ಮಕ್ಕಳ ಕಲಿಕೆ ಮೇಲೆ ಪರಿ ಣಾಮ ಬೀರುತ್ತಿದೆ.ಸರ್ಕಾರ ಈ ವಿಷಯವನ್ನು ಡಿಎಸ್‌ ಇಆರ್‌ಟಿ ತಜ್ಞರಿಗೆ ವಹಿಸಬೇಕು ಅದಕ್ಕಾಗಿ ದೃಢ ನಿರ್ಧಾರ ಕೈಗೊಳ್ಳಬೇಕು ಎಂದರು.

ಪಠ್ಯ ಪುಸ್ತಕ ಪೂರೈಕೆ ವಿಳಂಬವು ಮಕ್ಕಳ ಕಲಿಕೆ ಮೇಲೆ ಪರಿಣಾಮ ಬೀರುತ್ತಿದೆ.ಸರ್ಕಾರ ಈ ವಿಷಯವನ್ನು ಡಿಎಸ್‌ ಇಆರ್‌ಟಿ ತಜ್ಞರಿಗೆ ವಹಿಸಬೇಕು.ಅದಕ್ಕಾಗಿ ದೃಢ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರಶ್ನೆಯೊಂದಕ್ಕೆ ಹೊರಟ್ಟಿ ಪ್ರತಿಕ್ರಿ ಯಿಸಿದರು.ಇನ್ನೂ ಇವೆಲ್ಲದರ ನಡುವೆ ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರ ಸಮಸ್ಯೆ ಗಳು ಸಾಕಷ್ಟು ಪ್ರಮಾಣದಲ್ಲಿ ಇವೆ ಇವುಗಳ ಬಗ್ಗೆಯೂ ಧ್ವನಿ ಎತ್ತುತ್ತಿಲ್ಲ ಹೀಗಾಗಿ ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರು ಅಸಮಾಧಾನ ಗೊಂಡಿದ್ದಾರೆ‌

error: Content is protected !!
%d bloggers like this: