ಹುಬ್ಬಳ್ಳಿ –
ಶಿಕ್ಷಕರೊಬ್ಬರು ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರ ಭಾವಚಿತ್ರದ ಬ್ಯಾಡ್ಜ್ ಧರಿಸಿ ಮತಗಟ್ಟೆಗೆ ಆಗಮಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ ಹೌದು ನಗರದ ದೇಶಪಾಂಡೆ ನಗರದ ಎನ್.ಆರ್. ದೇಸಾಯಿ ರೋಟರಿ ಶಾಲೆಯ ಮತಗಟ್ಟೆಗೆ ಭೇಟಿ ನೀಡುವ ಮೂಲಕ, ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ

ಮತಗಟ್ಟೆಗೆ ಬಂದ ಇಬ್ಬರು ಶಿಕ್ಷಕರು ವಿಜಯದ ಸಂಕೇತ ಪ್ರದರ್ಶಿಸಿದರು.ಈ ಪೈಕಿ ನಗರದ ಸಿದ್ದರಾಮೇಶ್ವರ ಪ್ರೌಢ ಶಾಲೆಯ ಶಶಿಧರ ಗಾಜಿ ಅವರು ಬ್ಯಾಡ್ಜ್ ಧರಿಸಿದ್ದರು.ಈ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಕೂಡಾ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.ಚುನಾವಣಾ ಅಧಿಕಾರಿಗಳು ಮತಗಟ್ಟೆ ಗಳ ಬಳಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿ ಕೊಳ್ಳಬೇಕು.ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮತಗಟ್ಟೆ ಸುತ್ತಮುತ್ತ ಮಾಡಬೇಕು.ಘಟನೆ ಬಗ್ಗೆ ಚುನಾ ವಣಾ ಆಯೋಗಕ್ಕೆ ದೂರು ನೀಡುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಬಸವ ರಾಜ ಗುರಿಕಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.