ಬೆಂಗಳೂರು –
ರಾಜಸ್ಥಾನ ಸರ್ಕಾರವು ಬುಧವಾರ ಮಂಡಿಸಿದ ಆಯವ್ಯ ಯ ಪತ್ರದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ನೌಕರರಿಗೆ ನೆರವಾಗಿದ್ದು ಹಳೆ ಪಿಂಚಣಿ ಯೋಜನೆಯನ್ನು ಮುಂದು ವರಿಸುವ ದಿಟ್ಟ ನಿರ್ಧಾರ ತೆಗೆದುಕೊಳ್ಳುವ ಮೂಲಕ ಅಲ್ಲಿನ ಸ್ಥಳೀಯ ರಾಜ್ಯ ಸರ್ಕಾರಿ ನೌಕರರ ಭವಿಷ್ಯಕ್ಕೆ ಸುರಕ್ಷತೆ ಒದಗಿಸಿದೆ.ಇದು ಸ್ವಾಗತಾರ್ಹ ಘೋಷಣೆಯಾ ಗಿದ್ದು ಅದೇ ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿಯೂ ರಾಜ್ಯ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಕುರಿತು ಈ ಬಾರಿಯ ಆಯವ್ಯಯದಲ್ಲಿ ಘೋಷಣೆ ಮಾಡುವಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅವರು ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದಾರೆ

ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಬಸವರಾಜ ಎಸ್. ಹೊರಟ್ಟಿ ಅವರು ನಮ್ಮ ರಾಜ್ಯದಲ್ಲಿ ಯೂ ದಿನಾಂಕ 01-04-2006ರ ನಂತರದ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಲಾ ಗಿದ್ದು ಇದರಿಂದ ಲಕ್ಷಾಂತರ ನೌಕರರಿಗೆ ನಿವೃತ್ತಿಯ ನಂತರ ಯಾವುದೇ ರೀತಿಯ ಆರ್ಥಿಕ ಸೌಲಭ್ಯ ದೊರೆಯದೇ ಜೀವನೋಪಾಯ ಕಷ್ಟ ಸಾಧ್ಯವಾಗಿದೆ.ಆದುದರಿಂದ ರಾಜಸ್ಥಾನ ಸರ್ಕಾರದ ಮಾದರಿಯಂತೆ ಇದೇ ಮಾರ್ಚ್ 04 ರಂದು ಮಂಡಿಸುವ 2022-23ನೇ ಸಾಲಿನ ಕರ್ನಾಟಕ ರಾಜ್ಯದ ಆಯವ್ಯಯದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಹತ್ವದ ನಿರ್ಧಾರವನ್ನು ಪ್ರಕಟಿಸಿ ರಾಜ್ಯ ಸರ್ಕಾರಿ ನೌಕರರ ಬಾಳಿ ನಲ್ಲಿ ಹೊಸ ಭರವಸೆ ಮೂಡಿಸಿವಂತೆ ಮುಖ್ಯಮಂತ್ರಿಗ ಳನ್ನು ಕೋರಿದ್ದಾರೆ.

ಅದೇ ರೀತಿ ಕೇಂದ್ರ ಸರ್ಕಾರಿ ನೌಕರರಿಗೆ ಸರಿ ಸಮಾನ ವಾಗಿ ರಾಜ್ಯ ಸರ್ಕಾರಿ ನೌಕರರಿಗೆ ಸಮಾನ ವೇತನ ಮತ್ತಿತರ ಸೌಲಭ್ಯ ನೀಡುವ ನಿಟ್ಟಿನಲ್ಲಿ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸುವುದರೊಂ ದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿ ರುವ ತಾರತಮ್ಯಕ್ಕೆ ಅಂತ್ಯ ಹಾಡುವ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ನ್ಯಾಯ ಒದಗಿಸಿಕೊಡುವಂತೆಯೂ ಸಹ ಪತ್ರದಲ್ಲಿ ಕೋರಿದ್ದಾರೆ.