ಬೆಂಗಳೂರು –
ರಾಜ್ಯದ ಹೊಸ ಮುಖ್ಯಮಂತ್ರಿ ಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.ಬಿಜೆಪಿ ಪಕ್ಷದ ಹಿರಿಯ ರಾಜಕಾರಣಿ ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತ ಬಸವರಾಜ ಬೊಮ್ಮಾಯಿ ಗೆ ರಾಜ್ಯದ ಮುಖ್ಯಮಂತ್ರಿ ಪಟ್ಟ ಒಲಿದು ಬಂದಿದೆ.

ಬಸವರಾಜ ಬೊಮ್ಮಾಯಿ ಅವರು ಬಿಎಸ್ ವೈ ಆಪ್ತ ಬಳದವರಾಗಿದ್ದು ಅವರು ಹೇಳಿದಂತೆ ಕೊನೆಗೂ ಅವರಿಗೆ ನಾಡಿನ ಮುಖ್ಯಮಂತ್ರಿ ಯನ್ನಾಗಿ ಒಮ್ಮತದ ತೀರ್ಮಾನವನ್ನು ಮಾಡಲಾಗಿದೆ. ದೆಹಲಿಯಿಂದ ಆಗಮಿಸಿದ ಪಕ್ಷದ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕೋರ್ ಕಮಿಟಿ ಸಭೆಯಲ್ಲಿ ಬಸವರಾಜ ಬೊಮ್ಮಾ ಯಿ ಹೆಸರನ್ನು ವರಿಷ್ಠರು ಆಯ್ಕೆ ಮಾಡಿರುವ ಬಗ್ಗೆ ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರನ್ನು ನೂತನ ಸಿಎಂ ಆಗಿ ಆಯ್ಕೆ ಮಾಡಲು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕಾಂ ಗ ಸಭೆಯಲ್ಲಿ ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾ ಗಿದೆ. ನಂತರ ಪಕ್ಷದ ವರಿಷ್ಠರು ಅಧಿಕೃತವಾಗಿ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದರು.

ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದ ಶಾಸಕರಾಗಿರುವ ಬಸವರಾಜ ಬೊಮ್ಮಾಯಿ ಜೆಡಿಯು ಪಕ್ಷದಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದರು.ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ವರಿಷ್ಠರು, ಸಂಘ ಪರಿವಾರ ಮತ್ತು ಯಡಿಯೂರಪ್ಪ ಅವರ ಸಹಮತ ದೊಂದಿಗೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ತಮ್ಮ ಆಯ್ಕೆ ಖಚಿತವಾಗುತ್ತಿದ್ದಂತೆ ಬಸವರಾಜ ಬೊಮ್ಮಾಯಿ ಪ್ರತಿ ಶಾಸಕರನ್ನು ಭೇಟಿಯಾಗಿ ಮಾತನಾಡಿದ್ದಾರೆ.ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನಾಗಿ ಬಸವರಾಜ ಬೊಮ್ಮಾಯಿ ಆಯ್ಕೆ ಮಾಡಿದ್ದು, ಈ ಮೂಲಕ ಕರ್ನಾಟಕ ರಾಜ್ಯದ 20 ನೇ ಮುಖ್ಯಮಂತ್ರಿಯಾಗಿ ಅಧಿಕಾರವನ್ನು ನಾಳೆ ವಹಿಸಲಿದ್ದಾರೆ

ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿ ರುವ ಬಸವರಾಜ ಬೊಮ್ಮಾಯಿ ನೂತನ ಸರ್ಕಾರ ವನ್ನು ರಚಿಸುವ ಸಲುವಾಗಿ ಅವರು ಇಂದು ರಾತ್ರಿಯೇ ಅಥಾವ ನಾಳೆ ಬೆಳಗ್ಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸರ್ಕಾರ ರಚಿಸಲು ಅಗತ್ಯವಿರುವ ಶಾಸಕರ ಬೆಂಬಲಿತ ಪತ್ರವನ್ನು ನೀಡಲಿದ್ದಾರೆ.

ಬಳಿಕ ಥಾವರ್ ಚಂದ್ ಗೆಹ್ಲೋಟ್ ಅವರ ನಿರ್ದೇಶ ನದಂತೆ ನೂತನ ಸಿಎಂ ಪದ ಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಎಲ್ಲವೂ ಅಂದುಕೊಂಡತೆ ಆದರೆ ನಾಳೆ ಸಂಜೆಯೊಳಗೆ ಅವರು ತಮ್ಮ ನೂತನ ಮಂತ್ರಿ ಮಂಡಲದ ಜೊತೆಗೆ ರಾಜಭವನದಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಸಲುವಾಗಿ ಇಂದು ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕರುಗಳು ಹಾಗೂ ಬಿಜೆಪಿ ಶಾಸಕರು ಹಾಜರಿದ್ದರು, ತಮ್ಮ ಶಾಸಕಾಂಗ ಪಕ್ಷದ ನಾಯಕನ ನ್ನು ಆಯ್ಕೆ ಮಾಡಿದರು.ಇನ್ನೂ ಇತ್ತ ಇವೆಲ್ಲದರ ನಡುವೆ ಮುಖ್ಯಮಂತ್ರಿ ಸ್ಥಾನದಲ್ಲಿ ಸಾಲು ಸಾಲು ಪಟ್ಟಿ ಇತ್ತು. ಅರವಿಂದ ಬೆಲ್ಲದ,ಉಮೇಶ ಕತ್ತಿ, ಮುರಗೇಶ ನಿರಾಣಿ,1988 ರಿಂದ 1989 ರ ಅವಧಿಯಲ್ಲಿ ರಾಜ್ಯದಲ್ಲಿ ಎಸ್ ಆರ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರು.ನಂತರ ಈಗ ಅವರ ಮಗ ಬಸವರಾಜ ಬೊಮ್ಮಾಯಿ ಅವರು ಮುಖ್ಯ ಮಂತ್ರಿಯಾಗಿದ್ದು ನಾಳೆ ಮಧ್ಯಾಹ್ನ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.