ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಶೀಘ್ರದಲ್ಲೇ ವಿಶೇಷ ಸಭೆ ಬಸವರಾಜ ಹೊರಟ್ಟಿ – ಅರ್ಥಪೂರ್ಣವಾಗಿ ನಡೆಯಿತು ಶಿಕ್ಷಕರ ಮಹಾಸಭೆ,ಶಿಕ್ಷಕ ರತ್ನ ಪ್ರಶಸ್ತಿ ಪ್ರಧಾನ…..

Suddi Sante Desk

ಹುಬ್ಬಳ್ಳಿ –

ಶಿಕ್ಷಕರ ಬೇಡಿಕೆಗಳನ್ನು ಪರಿಹರಿಸಲು ಮತ್ತು ಸಮಸ್ಯೆಗಳ ಪರಿಹಾರಕ್ಕೆ ಶೀಘ್ರದಲ್ಲೇ ವಿಶೇಷವಾದ ಸಭೆಯನ್ನು ಕರೆಯಲಾಗುತ್ತದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿಶೇಷ ಸಭೆಯನ್ನು ಮುಂದಿನ ಜನವರಿ 15ರ ನಂತರ ಕರೆಯಲಾಗುವುದು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ನಗರದ ಸಿದ್ಧಾರೂಢ ಮಠದ ಕಲ್ಯಾಣಮಂಟಪ ದಲ್ಲಿ ಶನಿವಾರ ಆಯೋಜಿಸಿದ್ದ ‘ಗ್ರಾಮೀಣ ಶಿಕ್ಷಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿ ದರು.ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುವುದಕ್ಕಾಗಿ ನಾನು ಸಚಿವನಾಗಿದ್ದಾಗ ವರ್ಗಾವಣೆ ನೀತಿ ಜಾರಿ ಮಾಡಲಾಗಿತ್ತು.ನಂತರ ಅದರಲ್ಲಿ ಹಲವು ಬದಲಾವಣೆಗಳಾಗಿವೆ.ಈ ಕುರಿತು ಯಾವ ಸಚಿವರೂ ಚಿಂತನೆ ನಡೆಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು ಶಿಕ್ಷಕರ ಸಮಸ್ಯೆಗಳು ಹನುಮಂತನ ಬಾಲದಂತಿವೆ.ಒಂದು ಸಮಸ್ಯೆ ಬಗೆಹರಿಸಿದರೆ ಮತ್ತೊಂದು ಶುರುವಾಗುತ್ತದೆ.ಕೆಲ ಅಧಿಕಾರಿಗಳ ಮೂರ್ಖತನದಿಂದ ಶಿಕ್ಷಕರಿಗೆ ತೊಡಕಾಗು ತ್ತಿದೆ.ಕೃಪಾಂಕ ನೀಡುವುದರಲ್ಲೂ ಲೋಪ ಎಸಗಿರುವುದು ಇದಕ್ಕೆ ಉದಾಹರಣೆ.ಶಿಕ್ಷಕರು ನೆಮ್ಮದಿಯಿಂದ ಇದ್ದರೆ ಮಾತ್ರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸಾಧ್ಯ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯ ಘಟಕದ ಅಧ್ಯಕ್ಷ ಮಹೇಶ ಜೋಶಿ ಅವರನ್ನು ಸನ್ಮಾನಿಸಲಾಯಿತು.ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ ಕರ್ನಾಟಕ ವಿದ್ಯಾವ ರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್‌. ಭಟ್‌, ಕರ್ನಾಟಕ ಶಿಕ್ಷಕರ ಸಂಘ ಗಳ ಪರಿಷತ್ತಿನ ಅಧ್ಯಕ್ಷ ಗುರು ತಿಗಡಿ,ಎಲ್ ಐ ಲಕ್ಕಮ್ಮ ನವರ,ಪವಾಡೆಪ್ಪ,ನಾರಾಯಣಸ್ವಾಮಿ, ಸೇರಿದಂತೆ ರಾಜ್ಯದ ಮೂಲೆ ಮೂಲೆ ಮೂಲೆಗಳಿಂದ ಶಿಕ್ಷಕರು ಆಗಮಿಸಿ ಕಾರ್ಯಕ್ರಮಕ್ಕೆ ಶೋಭೆ ತಂದರು ಸಮಾರಂಭ ದ ಬಳಿಕ ಸಂಘದ ಎರಡನೇ ಮಹಾಸಭೆ ಜರುಗಿತು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.