ಬೆಂಗಳೂರು –
ರಾಜ್ಯದಲ್ಲಿ ಮತ್ತೆರಡು ಕ್ಷೇತ್ರಗಳಿಗೆ ಚುನಾವಣೆ ನಡೆಯು ತ್ತಿದ್ದು ಕೈ ಪಕ್ಷವು ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ದಕ್ಷಿಣ ಪದವೀಧರ ಕ್ಷೇತ್ರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಗಳ ಕಾಂಗ್ರೆಸ್ ಪ್ರಕಟಿಸಿದೆ.

ಜಿ.ಮಾದೇಗೌಡ ಪುತ್ರ ಮಧು ಮಾದೇಗೌಡರನ್ನು ದಕ್ಷಿಣ ಪದವೀಧರ ಕ್ಷೇತ್ರದಿಂದ ಕಣಕ್ಕಿಳಿಸಿದರೆ.ಇನ್ನೂ ಇತ್ತ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘಟನೆಯಲ್ಲಿ ಬಹು ಅವಧಿಯಲ್ಲಿ ಗುರುತಿಸಿಕೊಂಡಿದ್ದ ಬಸವರಾಜ ಗುರಿಕಾರ್ ಅವರಿಗೆ ಸ್ಪರ್ಧಿಸಲು ಅವಕಾಶ ನೀಡಿದೆ.ಹೀಗಾಗಿ ಬಸವರಾಜ ಹೊರಟ್ಟಿ ವಿರುದ್ಧ ಇವರೇ ಅಖಾಡಕ್ಕೆ ಇಳಿಯಲಿದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅವರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ.