ಹುಬ್ಬಳ್ಳಿಯಲ್ಲಿ ಪೊಲೀಸ್ ವಾಹನ ಹಸ್ತಾಂತರ – ಬಸವರಾಜ ಹೊರಟ್ಟಿ ಚಾಲನೆ…..

Suddi Sante Desk

ಹುಬ್ಬಳ್ಳಿ –

ವಿವಿಧ ಇಲಾಖೆಗಳ ಬೇಡಿಕೆಗೆ ಅನುಗುಣವಾಗಿ ವಾಹನ ಗಳನ್ನು ನೀಡಲಾಗುವುದು ಇಲಾಖೆಗಳು ತಮಗೆ ಬೇಡಿಕೆ ಯಿದ್ದರೆ ಪ್ರಸ್ತಾವನೆಯನ್ನು ಸಲ್ಲಿಸಿದ ತರುವಾಯ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳ ಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು.

ಹುಬ್ಬಳ್ಳಿಯ ಮಿನಿವಿಧಾನಸೌಧ ಆವರಣದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ನೀಡಿರುವ ಬೊಲೆರೋ ವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿ ವರ್ಷ ಶಾಸಕರಿಗೆ ನೀಡಲಾಗುವ 2 ಕೋಟಿ ಅನುದಾನದಲ್ಲಿ ರಸ್ತೆ,ಕಟ್ಟಡ,ವಾಹನಗಳು,ಅಂಬ್ಯುಲೆನ್ಸ್ ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವ ಕಾರ್ಯಗಳಿಗೆ ಉಪಯುಕ್ತ ರೀತಿಯಲ್ಲಿ ಬಳಕೆಯಾಗ ಬೇಕು.ಪೊಲೀಸ್ ಇಲಾಖೆಗೆ ಹಳೆಯ ವಾಹನಗಳಿಗೆ ಬದಲಾಗಿ ಹೊಸ ವಾಹನಗಳನ್ನು ನೀಡಲಾಗಿದೆ. ಅವುಗಳ ನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು.ಗ್ರಾಮೀಣ ಪೊಲೀಸ್ ಠಾಣೆಗೆ ವಾಹನಗಳು ಅವಶ್ಯವಾಗಿದ್ದವು. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾ ಗಿದೆ. ಪಿಯುಸಿ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ಆಯಾ ಕಾಲೇಜುಗಳಿಗೆ ಸಂಬಂಧಿಸಿದೆ. ಹೈಕೋರ್ಟ್ ತೀರ್ಪು ಬರುವವರೆಗೆ ಸಮಾಜಕ್ಕೆ ಧಕ್ಕೆ ತರುವ ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಬಾರದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ್, ಡಿವೈಎಸ್ಪಿ ಎಂ‌.ಬಿ. ಸಂಕದ, ಪೊಲೀಸ್ ಇನ್ಸ್ಪೆಕ್ಟರ್ ರಮೇಶ ಗೋಕಾಕ,ಜಿ.ಸಿ.ಡೂಗನವರ, ರವಿಚಂದ್ರ ಡಿ.ಬಿ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ಡೇವಿಡ್ ಸೇರಿದಂತೆ ಹಲವರು ಇದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.