ಧಾರವಾಡ –
ರಾಜ್ಯ ಸರ್ಕಾರದ ವಿರುದ್ದ ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಮತ್ತೊಂದು ಹೋರಾಟಕ್ಕೇ ಮುಂದಾಗಿದ್ದಾರೆ. ಈ ಹಿಂದೆ ದೊಡ್ಡ ಪ್ರಮಾಣದಲ್ಲಿ ಹೋರಾಟ ಮಾಡಿದ್ದ ಹೊರಟ್ಟಿಯವರು ಈಗ ಮತ್ತೊಂದು ಹೋರಾಟಕ್ಕೇ ಸಿದ್ದರಾಗಿದ್ದಾರೆ. ಡಿಸೆಂಬರ್ 5 ರಿಂದ ಧಾರವಾಡದಲ್ಲಿ ಉಪವಾಸ ಸತ್ಯಾಗ್ರಹದೊಂದಿಗೆ ಹೋರಾಟವನ್ನು ಆರಂಭ ಮಾಡಲಿದ್ದಾರೆ.

ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ,ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ನೌಕರರ ಮತ್ತು ಆಡಳಿತ ಮಂಡಳಿಗಳ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ನೇತ್ರತ್ವದಲ್ಲಿ ಬಸವರಾಜ ಹೊರಟ್ಟಿಯವರು ಮತ್ತೊಂದು ಹೋರಾಟವನ್ನು ಮಾಡುತ್ತಿದ್ದಾರೆ.

ಪ್ರಮುಖವಾಗಿ 1995 ರ ನಂತರ ಆರಂಭಗೊಂಡ ಶಾಶ್ವತ ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ಅನುದಾನ ನೀಡುಬೇಕು,ನೂತನ ಪಿಂಚಣಿ ಯೋಜನೆ ಜಾರಿಗೆ ತರಬೇಕು, ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಧಾರವಾಡದ ಮುತ್ತಣ್ಣ ಸ್ಮಾರಕ ಪೊಲೀಸ್ ವಸತಿ ಶಾಲೆಯ ಶಿಕ್ಷಕರ ವೇತನ ಬಿಡುಗಡೆ ಹಾಗೇ ಶಾಲಾ ಆರಂಭಕ್ಕೇ ಅವಕಾಶ ನೀಡಬೇಕು ಹೀಗೆ ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಈ ಒಂದು ಸತ್ಯಾಗ್ರಹ ಆರಂಭವಾಗಲಿದ್ದು ಹೋರಾಟದಲ್ಲಿ ರಾಜ್ಯದ ರಾಜ್ಯದ ಕೇಂದ್ರ ಸಮಿತಿಯ ಸದಸ್ಯರು ಎಲ್ಲಾ ಜಿಲ್ಲಾ ಕೇಂದ್ರದಿಂದ ಶಿಕ್ಷಕರು ಶಿಕ್ಷಣ ಸಂಸ್ಥೆಗಳ ಮಾಲೀಕರು ಸೇರಿದಂತೆ ಹಲವರು ಹೊರಟ್ಟಿಯವರೊಂದಿಗೆ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆ.