ಬೆಂಗಳೂರು –
ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಸಭಾಪತಿಯಾಗಿ ಅಧಿಕಾರ ವಹಿಸಿಕೊಂಡಿರುವ ಕಾರಣ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡರಿಗೆ ಇಂದು ರಾಜೀನಾಮೆ ಪತ್ರ ಕಳುಹಿಸಿದ್ದಾರೆ.
ಫೆಬ್ರವರಿ 9 ರಂದು ನಡೆದ ಪರಿಷತ್ ಸಭಾಪತಿ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷ ಭಾಗಿಯಾಗಿರಲಿಲ್ಲ.ಹಿನ್ನೆಲೆಯಲ್ಲಿ ಬಸವರಾಜ ಹೊರಟ್ಟಿ ಅವರು ಬಿಜೆಪಿ ಬೆಂಬಲದೊಂದಿಗೆ ಅವಿರೋಧವಾಗಿ ಸಭಾಪತಿಯಾಗಿ ಆಯ್ಕೆಯಾಗಿ ದ್ದರು.ಹೀಗಾಗಿ ಪಕ್ಷಪಾತವಾಗಿ ಕಾರ್ಯ ನಿರ್ವಹಣೆ ಹಿನ್ನೆಲೆಯಲ್ಲಿ ಈಗ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.