ಬೆಂಗಳೂರು –
ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದ ಬಿಬಿಎಂಪಿ ಪ್ರಭಾರ ಸಹಾಯಕ ನಿರ್ದೇಶಕ ಎಸ್.ಎನ್.ದೇವೇಂದ್ರಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಎಸ್.ಎನ್. ದೇವೇಂದ್ರಪ್ಪ ಅವರು ಬೊಮ್ಮನಹಳ್ಳಿ ವಲಯ ಕಚೇರಿಯಲ್ಲಿ ಕಳೆದ ಜೂನ್ 1ರಿಂದ ಮಧ್ಯಾಹ್ನ ಹಾಜರಾತಿ ಸಲ್ಲಿಸಿ ಕಾರ್ಯ ನಿರ್ವಹಿಸುತ್ತಿದ್ದರು. ಫೆ.5 ರಂದು ಭ್ರಷ್ಟಾಚಾರ ನಿಗ್ರಹ ದಳ ಬಲೆಗೆ ದೇವೇಂದ್ರಪ್ಪ ಸಿಕ್ಕಿಬಿದ್ದು ಬಂಧಿತರಾಗಿದ್ದರು.

ಸದರಿ ಅಧಿಕಾರಿ ವಿರುದ್ಧ ಮುಂದಿನ ಸೂಕ್ತ ಕ್ರಮ ಕೈಗೊಳ್ಳಲು ಬೊಮ್ಮನಹಳ್ಳಿ ಜಂಟಿ ಆಯುಕ್ತರು ಆದೇಶ ನೀಡಿದ್ದಾರೆ. ಕೆಸಿಎಸ್ ಸಿಸಿಎ ನಿಯಮ 10ರ ಅನ್ವಯ ಕರ್ತವ್ಯ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಎಸಿಬಿಯಿಂದ ದಸ್ತಗಿರಿಯಾದ ಕಾರಣ ಫೆ.5ರಿಂದ ಜಾರಿಗೆ ಬರುವಂತೆ ಇಲಾಖಾ ವಿಚಾರಣಾ ನಿರೀಕ್ಷಿಸಿ ಅಮಾನತು ಮಾಡಲಾಗಿದೆ.