ಕೊಲ್ಕತ್ತಾ –
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಬೆಳಗ್ಗೆ ಮನೆಯಲ್ಲಿ ಹೃದಯ ಸಮಸ್ಯೆ ಕಾಣಿಸಿಕೊಂಡಿತು.ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಇಂದು ಬೆಳಗ್ಗೆ ತೀವ್ರವಾಗಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕಲ್ಕತ್ತಾದ ವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಬಳಿಕ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಾಯಿತು.ಇನ್ನೂ ಈ ಘಟನೆ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ.
ಅವರು ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಆಶಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇನ್ನೂ ಇತ್ತ ಆಸ್ಪತ್ರೆಯಲ್ಲಿ ಸೌರವ್ ಗಂಗೂಲಿ ಅವರು ಗುಣ ಮುಖರಾಗುತ್ತಿದ್ದು ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.