ಕೊಲ್ಕತ್ತಾ –
ಈಗಾಗಲೇ ಎದೆನೋವು ಕಾಣಿಸಿಕೊಂಡು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಬಳಿಕ ಗುಣಮುಖ ರಾಗಿದ್ದ ಸೌರವ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಇದೀಗ ಮತ್ತೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದಾಗಿ ಅವರನ್ನು ಕೊಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.