ಹುಬ್ಬಳ್ಳಿ –
ಪ್ರೀತಿಸುವುದಾಗಿ ಹೇಳಿ ಯುವತಿಯೊಬ್ಬಳಿಗೆ ವಿಡಿಯೋ ಕಾಲ್ ಮಾಡಿ ಅದನ್ನು ಚಿತ್ರಿಕರಣ ಮಾಡಿಕೊಂಡು ಎಡಿಟ್ ಮಾಡಿ ಅಶ್ಲೀಲ ಮಾಡಿ ಸ್ಟೇಟಸ್ ಗೆ ಇಟ್ಟ ಪ್ರಕರಣವೊಂದು ಹುಬ್ಬಳ್ಳಿಯಲ್ಲಿ ನಡೆದಿದ್ದು ಈ ಕುರಿತಂತೆ ಸೈಬರ್ ಠಾಣೆ ಯಲ್ಲಿ ದೂರು ದಾಖಲಾಗಿದೆ.
ಯುವತಿಯೊಬ್ಬಳನ್ನು ಪ್ರೀತಿಸುವುದಾಗಿ ನಂಬಿಸಿ ನಗ್ನ ವಿಡಿಯೋ ಕಾಲ್ ಮಾಡಿದ್ದಾನೆ ಭೂಪನೊಬ್ಬ. ಫೋಟೋ ವನ್ನು ಎಡಿಟ್ ಮಾಡಿ ನಂತರ ಅದನ್ನು ವಾಟ್ಸ್ ಆ್ಯಪ್ ಸ್ಟೇಟಸ್ಗೆ ಇಡುವ ಮೂಲಕ ವಿಕೃತಿಯನ್ನು ಮೆರೆದಿದ್ದಾನೆ
ಮಹಾರಾಷ್ಟ್ರದ ಶಿರಡಿ ಮೂಲದ ಶುಭಂ ಮಧುಕರ ವಿರುದ್ದ ಈಗ ಕೂಲೆ ಮತ್ತು ಇತರೆ ಪ್ರಕರಣ ಕುರಿತಂತೆ ಸೈಬರ್ ಕೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾ ಗಿದೆ.ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ಶುಭಂ. ಅದೇ ಕಾಲೇಜಿನ 20 ವರ್ಷದ ಕಿರಿಯ ವಿದ್ಯಾರ್ಥಿನಿಯ ಸ್ನೇಹ ಸಂಪಾದಿಸಿದ್ದನು.ಬಳಿಕ ಪ್ರೀತಿಸುವುದಾಗಿ ನಂಬಿಸಿ ವಾಟ್ಸ್ ಆ್ಯಪ್ ನಂಬರ್ ಪಡೆದಿದ್ದನು.
ಚಾಟಿಂಗ್ ಮೂಲಕ ಸಲುಗೆ ಬೆಳೆಸಿಕೊಂಡು ಮದುವೆಯಾ ಗುವುದಾಗಿ ನಂಬಿಸಿದ್ದನು.ಯುವತಿಯ ನಗ್ನ ವಿಡಿಯೋ ಕಾಲ್ ರೆಕಾರ್ಡ್ ಮಾಡಿಕೊಂಡಿದ್ದ. ನವಂಬರ್ 11 ರಂದು ಆಕೆಯ ನಗ್ನ ಫೋಟೋ ಎಡಿಟ್ ಮಾಡಿ ಸ್ಟೇಟಸ್ಗೆ ಹಾಕಿ ದ್ದಾನೆ.ಇದರಿಂದ ನೊಂದ ಯುವತಿ ಪೊಲೀಸ್ ಠಾಣೆಗೆ ದೂರು ದಾಖಲು ಮಾಡಿದ್ದು ಸಧ್ಯ ದೂರನ್ನು ದಾಖಲು ಮಾಡಿಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.