ಧಾರವಾಡ –
ಟಂಪೊ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಹೊರವಲಯದ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಇಟಿಗಟ್ಟಿ ಯರಿಕೊಪ್ಪ ನಡುವೆ ಈ ಒಂದು ಭೀಕರ ರಸ್ತೆ ಅಪಘಾತ ನಡೆದಿದೆ.

ಟೆಂಪೊ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಸ್ಥಳದಲ್ಲೇ ಐದಕ್ಕೂ ಹೆಚ್ಚು ಜನ ಸಾವಿಗೀಡಾದ ಶಂಕೆ ವ್ಯಕ್ತವಾಗಿದೆ.ಅಪಘಾತದಲ್ಲಿ ಟೆಂಪೂ ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ. ಐದಕ್ಕೂ ಹೆಚ್ಚು ಸಾವಿಗೀಡಾದ್ದು ಸಧ್ಯ ವಿಷಯ ತಿಳಿದ ಧಾರವಾಡ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುತ್ತಿದ್ದು ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.