ಬೆಂಗಳೂರು –
ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ನಿವಾಸದ ಬಳಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಘರ್ಷಣೆ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಎಸ್ಪಿಯನ್ನು ಅಮಾನತು ಮಾಡಲಾಗಿದೆ.ಬ್ಯಾನರ್ ಕಟ್ಟುವ ವಿಚಾರಕ್ಕೆ ಘರ್ಷಣೆಯಾಗಿ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅವರನ್ನು ಸರ್ಕಾರ ಅಮಾನತು ಮಾಡಿದೆ.ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ ಹಾಗೂ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲ.
ಮೇಲಾಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲವೆಂದು ಅವರನ್ನು ಅಮಾನತು ಮಾಡಲಾಗಿದೆ. ಎಸ್‌ಪಿ ಪವನ್ ವಿರುದ್ಧ ಕಠಿಣ ಕ್ರಮಕ್ಕೆ ಡಿಜಿ ಐಜಿಪಿ ಸೂಚನೆ ನೀಡಿದ್ದಾರೆ. ನಿನ್ನೆಯಷ್ಟೇ ಬಳ್ಳಾರಿ ಎಸ್ಪಿ ಆಗಿ ಪವನ್ ಅಧಿಕಾರ ಸ್ವೀಕರಿಸಿದ್ದರು ಅಧಿಕಾರ ವಹಿಸಿಕೊಂಡ ಮಾರನೆಯ ದಿನವೇ ಅಮಾನತು ಮಾಡಲಾಗಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..



