ಬೆಂಗಳೂರು –
ರಾಜ್ಯದ ರಾಜಧಾನಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು ಜೋರಾಗಿದ್ದು ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ
ಬೆಂಗಳೂರಿನ ಮೆಜೆಸ್ಟಿಕ್,ರೇಸ್‌ಕೋರ್ಸ್,ರಾಜಾಜಿನಗರ, ಮಲ್ಲೇಶ್ವರಂ ಸೇರಿದಂತೆ ವಿವಿಧೆಡೆ ಮಳೆಯಿಂದಾಗಿ ರಸ್ತೆಗಳು ಜಲಾವೃತ್ತಗೊಂಡಿವೆ.ಜನರು ರಸ್ತೆಯಲ್ಲಿ ನಡೆದಾ ಡುವುದಕ್ಕೂ ಕಷ್ಟಪಡುವಂತಾಗಿದೆ.ಇದರಿಂದಾಗಿ ವಾಹನ ಸಂಚಾರಕ್ಕೂ ತೊಂದರೆಯಾಗಿದ್ದು ಸವಾರರು ಜೀವಭಯ ದಲ್ಲಿ ತೆರಳಬೇಕಿದೆ.ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ ಹಾಗೂ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.