ಬೈಂದೂರು –
ಬೈಂದೂರಿನಲ್ಲಿ ಇತ್ತೀಚೆಗೆ ನಡೆದ ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಶಿಕ್ಷಕರು,ಮಕ್ಕಳ ಪೋಷಕರು, ಇಲಾಖಾ ಸಿಬ್ಬಂದಿಗಳು ಹಾಜರಾಗುವಂತೆ ಸೂಚನೆ ನೀಡಿ ಕರ್ತವ್ಯ ಲೋಪ ಎಸಗಿದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಎಂ.ಜಿ. ಅವರನ್ನು ಅಮಾನತುಗೊಳಿಸಲಾಗಿದೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮ ಚಂದ್ರಪ್ಪ ಆದೇಶ ಹೊರಡಿಸಿದ್ದಾರೆ.
ನವೆಂಬರ್ 7ರಂದು ಬೈಂದೂರು ತಾಲೂಕಿನ ಹೊಸಾಡು ಗ್ರಾಮದ ಮಲ್ಲಿಕಟ್ಟೆ ಎಂಬಲ್ಲಿ ನಡೆದ ಮುಖ್ಯಮಂತ್ರಿಗಳ ಸರಕಾರಿ ಕಾರ್ಯಕ್ರಮಕ್ಕೆ ಬೈಂದೂರು ವಲಯದ ಎಲ್ಲಾ ಶಿಕ್ಷಕರು, ಶಾಲಾ ಪೋಷಕರು,ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರದ ಎಲ್ಲ ಸಿಬ್ಬಂದಿ ವರ್ಗದವರಿಗೆ ಹಾಜರಾಗಲು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಎಂ.ಜಿ. ಸೂಚನೆ ನೀಡಿದ್ದರು.ಈ ಕಾರ್ಯಕ್ರಮಕ್ಕೆ ಭಾಗವಹಿಸಲು ಸೂಚಿಸಿರು ವುದು ಸರಕಾರಿ ನೌಕರರಿಗೆ ತರವಲ್ಲದ ವರ್ತನೆ ಯಾಗಿದ್ದು ಇವರು ನಿಯಮಗಳನ್ನು ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿರುವುದರಿಂದ ಇವರ ವಿರುದ್ಧ ಇಲಾಖಾ ವಿಚಾರಣೆ ಶಿಸ್ತು ಕ್ರಮ ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ನೀಡಲಾಗಿದೆ.
ವರದಿ – ಚಕ್ರವರ್ತಿ ಜೊತೆಗೆ ರವಿ ಗೌಡರ ಸುದ್ದಿ ಸಂತೆ ನ್ಯೂಸ್