This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

KMF ಅಧ್ಯಕ್ಷರಾಗಿ ಭೀಮಾ ನಾಯ್ಕ್ ಆಯ್ಕೆ – ಅವಿರೋಧವಾಗಿ ಆಯ್ಕೆಯಾದ ನೂತನ ಅಧ್ಯಕ್ಷರು…..

WhatsApp Group Join Now
Telegram Group Join Now

ಬೆಂಗಳೂರು

ಕರ್ನಾಟಕ ಹಾಲು ಮಾರಾಟ ಮಹಾಮಂಡಳ (ಕೆಎಂಎಫ್‌) ಅಧ್ಯಕ್ಷರಾಗಿ ಭೀಮಾ ನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಹೌದು ಇನ್ನೂ ಅವಧಿ ಇದ್ದರೂ ಕೂಡಾ ಸಿದ್ದರಾಮಯ್ಯ ಅವರ ಆಪ್ತರಾಗಿರುವ ಮಾಜಿ ಶಾಸಕ ಭೀಮಾ ನಾಯ್ಕ್ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು

ಹೀಗಾಗಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಭೀಮಾ ನಾಯ್ಕ್ ಅವರು ನಿರೀಕ್ಷೆಯಂತೆ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್​ ಅವರಿಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (ಕೆಎಂಎಫ್) ಅಧ್ಯಕ್ಷ ಸ್ಥಾನ ಒಲಿದಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬಾಲಚಂದ್ರ ಜಾರಕಿಹೊಳಿ ಅವರ ಅಧ್ಯಕ್ಷ ಸ್ಥಾನ ತೆರವಾಗಿದ್ದು ಚುನಾವಣೆ ಮೂಲಕ ಹೊಸ ಅಧ್ಯಕ್ಷ ರನ್ನು ಆಯ್ಕೆ ಮಾಡಲು ತೀರ್ಮಾನಿಸಲಾಗಿತ್ತು. ಆದರೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಯಾರು ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾ ದರು

ಒಟ್ಟು 14 ಒಕ್ಕೂಟದ ಪ್ರತಿನಿಧಿಗಳು, ಪಶು ಸಂಗೋಪನಾ ಇಲಾಖೆ ನಿರ್ದೇಶಕ, ಸಹಕಾರ ಇಲಾಖೆ ರಿಜಿಸ್ಟಾರ್‌, ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಒಬ್ಬರು ನಾಮನಿರ್ದೇಶಿತ ಸದಸ್ಯರು ಸೇರಿ ಒಟ್ಟು 18 ಮಂದಿ ಮತದಾನ ಹೊಂದಿದ್ದರು

ಆದ್ರೆ, ಭೀಮಾ ನಾಯ್ಕ್​ಗೆ ಎದುರಾಳಿಯಾಗಿ ಯಾರೂ ನಾಮಪತ್ರ ಸಲ್ಲಿಸಿಲ್ಲ ಇದರಿಂದ ಮತದಾನ ನಡೆಯದೇ ಭೀಮಾ ನಾಯ್ಕ್ ಅವರು​ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮಾ ನಾಯ್ಕ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದರು ಆದರೆ ಸಿದ್ದರಾಮಯ್ಯ ಅವರ ಆಪ್ತರ ಬಣದಲ್ಲಿ ಗುರುತಿಸಿಕೊಂಡಿದ್ದಾರೆ.

 

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk