ಧಾರವಾಡ –
ಧಾರವಾಡದಲ್ಲಿ ಸಿವಿಲ್ ನ್ಯಾಯಾಲಯಗಳ ಆವರಣದಲ್ಲಿ ಇಂದು ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನೂತನ ಕಟ್ಟಡದ ನಿರ್ಮಾಣ ಕಾಮಗಾರಿಗೆ ಕೇಂದ್ರ ಸಂಸದೀಯ ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿಯವರ ಶಂಕುಸ್ಥಾಪನೆ ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಶಂಕರ್ ಪಾಟೀಲ್ ಮುನೇನಕೊಪ್ಪ,ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಬೆಂಗಳೂರು ಇದರ ಅಧ್ಯಕ್ಷರು ಮತ್ತು ಗೌರವಾನ್ವಿತ ನ್ಯಾಯಮೂರ್ತಿ ಹುಲವಾಡಿ ರಮೇಶ್,

ಧಾರವಾಡ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಿ ಎಸ್ ಘೋಡಸೆ, ಹಾಗೂ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷರಾದ ಜಿ ಎಂ ಕುಂಬಾರ್,ರಾಜಶೇಖರ ಬೆಳ್ಳಕ್ಕಿ,

ಮಾಜಿ ಶಾಸಕಿ ಸೀಮಾ ಮಸೂತಿ,ಈರೇಶ ಅಂಚಟ ಗೇರಿ,ಶರಣು ಅಂಗಡಿ, ಮೋಹನ ರಾಮದುರ್ಗ, ಈರಣ್ಣಾ ಜಡಿ, ಮತ್ತು ಸ್ಥಳೀಯ ವಕೀಲರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತ ರಿದ್ದರು.