ಹುಬ್ಬಳ್ಳಿ-
7 ಕೋಟಿ ವೆಚ್ಚದಲ್ಲಿ ಉಣಕಲ್ ಮಾರಡಗಿ ಹಾಗೂ 3 ಕೋಟಿ ವೆಚ್ಚದಲ್ಲಿ ಉಣಕಲ್ ಹೆಬ್ಬಳ್ಳಿ ರಸ್ತೆ ನಿರ್ಮಾಣದ ಕಾಮಗಾರಿಗೆ ಇಂದು ಹುಬ್ಬಳ್ಳಿಯಲ್ಲಿ ಚಾಲನೆ ನೀಡಲಾಯಿತು. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಇಂದು ಭೂಮಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಕೇಂದ್ರದ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ, ಮಹಾನಗರ ಪಾಲಿಕೆ ಮಾಜಿ ಸದಸ್ಯರುಗಳಾದ ಉಮೇಶ್ ಕೌಜಗೇರಿ, ರಾಜಣ್ಣ ಕೊರವಿ, ಮಲ್ಲಿಕಾರ್ಜುನ ಗುಡೂರ, ಲೋಕೋಪಯೋಗಿ ಇಲಾಖೆ, ಹೆಚ್.ಡಿ.ಗುಂಡಳ್ಳಿ, ಎಸ್.ಪಿ.ಪಾಟೀಲ, ವಿನೂತ ಸೇರಿದಂತೆ ಗುತ್ತಿಗೆದಾರರು ಉಪಸ್ಥಿತರಿದ್ದರು.
ಇನ್ನೂ ಇದೇ ವೇಳೆ ಕೇಂದ್ರ ಮತ್ತು ರಾಜ್ಯ ಸಚಿವರು ಬಹುಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಎರಡು ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಹಾಗೇ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಶೀಘ್ರದಲ್ಲಿಯೇ ಮಾಡಿ ಮುಗಿಸುವಂತೆ ಸೂಚನೆ ನೀಡಿದ್ರು. ಹಾಗೇ ಕಾಮಗಾರಿ ಸಮಯದಲ್ಲಿ ಗುತ್ತಿಗೆದಾರದೊಂದಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ಸಚಿವರು ವಿನಂತಿಸಿಕೊಂಡ್ರು