ಬೆಂಗಳೂರು –
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ವೃದ್ದಾಶ್ರಮವೊಂದರಲ್ಲಿ ಇದ್ದ ಜಯಶ್ರೀ ಅಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ಖಿನ್ನತೆಯಿಂದ ಬಳಲುತ್ತಿದ್ದ ಅವರು ಕಳೆದ ಜುಲೈ ತಿಂಗಳಿನಲ್ಲೂ ಆತ್ಮಹತ್ಯೆಗೆ ಯತ್ನಿಸಿದ್ದರು. ತನ್ನ ಮೇಲೆ ಚಿಕ್ಕಂದಿನಿಂದಲೂ ದೌರ್ಜನ್ಯ ನಡೆಯುತ್ತಿದೆ ಎಂದು ಕುಟುಂಬ ಸದಸ್ಯರು ಹಾಗೂ ಮಾವನ ಮೇಲೆಯೂ ಅವರು ಆರೋಪ ಮಾಡಿದ್ದರು.

ಇವೆಲ್ಲದರ ನಡುವೆ ಈಗ ಸಧ್ಯ ಆತ್ಮಹತ್ಯೆಗೆ ಶರಣಾಗಿದ್ದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಇನ್ನೂ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಮಾಡ್ತಾ ಇದ್ದಾರೆ. ಆತ್ಮಹತ್ಯೆ ವಿಚಾರ ಕುರಿತಂತೆ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಕೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೊಲ್ಲರಹಟ್ಟಿಯಲ್ಲಿರುವ ಪ್ರಗತಿ ಬಡಾವಣೆಯಲ್ಲಿರುವ ವೃದ್ಧಾಶ್ರಮದಲ್ಲಿ ಈ ಘಟನೆ ನಡೆದಿದೆ. ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಜಯಶ್ರೀ ರಾಮಯ್ಯ ಅವರು ‘ಕನ್ನಡ ಗೊತ್ತಿಲ್ಲ’, ‘ಉಪ್ಪು ಹುಳಿ ಖಾರ’ ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಟಿಸಿದ್ದರು.